ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಕನ್ನಡದಲ್ಲಿಯೇ ಹೆಚ್‍ಡಿಕೆ, ಜೋಶಿ, ಸೋಮಣ್ಣ, ಶೋಭಾ ಪ್ರಮಾಣ ವಚನ ಸ್ವೀಕಾರ
ನವದೆಹಲಿ, ಜೂ.24.ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ , ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನೂತನ ಸಚಿವರಿಗೆ ರಾಷ್ಟ್ರಪತಿ ಭವನದಲ್ಲಿ ಹಂಗಾಮಿ ಸ್ಪೀಕರ್ ಒಡಿಶಾದ ಬಿಜೆಪಿ ಸಂಸದ ಭತೃಹರಿ ಮಹತಾಬ್ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಈ ವೇಳೆ ಮೂವರು ನೂತನ ಸಚಿವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಹೆಚ್.ಡಿ .ಕುಮಾರಸ್ವಾಮಿಯವರಿಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ, ಪ್ರಹ್ಲಾದ್ ಜೋಶಿಯವರಿಗೆ ಕಲ್ಲಿದ್ದಲು ಮತ್ತು ಗಣಿ ಇಲಾಖೆ , ರೈಲ್ವೇ ಇಲಾಖೆಯನ್ನು ವಿ.ಸೋಮಣ್ಣ ಅವರಿಗೆ ನೀಡಲಾಗಿದೆ. ಶೋಭಾ ಕರಂದ್ಲಾಜೆಯವರು ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.