ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ರಾಜ್ಯದ ಜನತೆಗೆ ಗಾಯದ ಮೇಲೆ ಮತ್ತೊಂದು ಬರೆ: ನಂದಿನಿ ಹಾಲಿನ ದರ ಏರಿಕೆ ಹೊರೆ; ನಾಳೆಯಿಂದಲೇ ಪರಿಷ್ಕೃತ ದರ ಜಾರಿ

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರಗಳನ್ನು ಏರಿಕೆ ಮಾಡಿದೆ. ಪ್ರತಿ ಲೀಟರ್‌ಗೆ 2 ರುಪಾಯಿ ಏರಿಕೆ ಮಾಡಲಾಗಿದ್ದು, ಒಂದು ಲೀಟರ್‌ ಹಾಲಿನ ದರ ನಾಳೆಯಿಂದ 44 ರೂ. ಆಗುತ್ತಿದೆ.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿಗೆ 2 ರೂ.ಏರಿಕೆ ಮಾಡಲಾಗಿದೆ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಕೆಎಂಎಫ್‌ ಇಡೀ ರಾಷ್ಟ್ರದಲ್ಲಿ ಅತಿ ದೊಡ್ಡ ಎರಡನೇ ದೊಡ್ಡ ಹಾಲಿನ ಮಂಡಲಿಯಾಗಿದೆ. 98 ಲಕ್ಷದ 17 ಸಾವಿರ ಲೀಟರ್ ಹಾಲು ನಮ್ಮಲ್ಲಿ ಶೇಖರಣೆ ಆಗುತ್ತಿದೆ. ಒಂದು ಕೋಟಿ ಲೀಟರ್ ಹಾಲಿನ ಶೇಖರಣೆ ಮಾಡಲು ಸಿದ್ಧರಾಗಿದ್ದೇವೆ. 27 ಲಕ್ಷ ಹಾಲು ಉತ್ಪಾದಕ ರೈತರಿಂದ ನಮಗಿದು ಸಾಧ್ಯವಾಗಿದೆ. 30 ಲಕ್ಷ ಲೀಟರ್ ಹಾಲು, ಹಾಲಿನ ಪೌಡರ್‌ಗೆ ಮೀಸಲಾಗಿದೆ ಎಂದು ಭೀಮಾ ನಾಯ್ಕ್‌ ಮಾಹಿತಿ ನೀಡಿದ್ದಾರೆ.ಬೇರೆ ರಾಜ್ಯಗಳಿಗೆ ಹಾಲಿನದರ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಪ್ಯಾಕೆಟ್ ಹಾಲಿನ ಬೆಲೆ ಕಡಿಮೆ ಇದೆ ಎಂದು ಹೇಳಿದ್ದಾರೆ. ನಾಳೆಯಿಂದಲೇ ಪರಿಷೃತ ಹಾಲಿನ ದರಗಳು ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

No Comments

Leave A Comment