ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ರಷ್ಯಾದಲ್ಲಿ ಬಂದೂಕುಧಾರಿಗಳಿಂದ ಧಾರ್ಮಿಕ ಕೇಂದ್ರದ ಮೇಲೆ ದಾಳಿ – ಪೊಲೀಸ್‌ ಅಧಿಕಾರಿ, ಪಾದ್ರಿ ಸೇರಿ 15 ಮಂದಿ ಹತ್ಯೆ

ರಷ್ಯಾದ ಡಾಗೆಸ್ತಾನ್‌ನಲ್ಲಿ ಅಪರಿಚಿತ ಬಂಧೂಕುದಾರಿಗಳು ಸಿನಗಾಗ್, ಆರ್ಥೊಡಾಕ್ಸ್ ಚರ್ಚ್‌ಗಳು ಹಾಗೂ ಪೊಲೀಸ್ ಪೋಸ್ಟ್‌ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಥೊಡಾಕ್ಸ್ ಚರ್ಚ್‌ನ ಪಾದ್ರಿ, ನಾಗರಿಕರು ಹಾಗೂ ಕನಿಷ್ಠ 15 ಮಂದಿ ಪೊಲೀಸ್‌ ಅಧಿಕಾರಿಗಳನ್ನು ಹತ್ಯೆಗೈದಿರುವ ಘಟನೆ ನಡೆದಿದೆ.

ಕಳೆದ ಮೂರ‍್ನಾಲ್ಕು ತಿಂಗಳ ಹಿಂದೆಯಷ್ಟೇ ಮಾಸ್ಕೋ ಬಳಿಯ ಸಂಗೀತ ಕಛೇರಿ ಹಾಲ್ ಮೇಲೆ ಇಸ್ಲಾಮಿಕ್ ಸ್ಟೇಟ್ ನಡೆಸಿದ ದಾಳಿಯಲ್ಲಿ 145 ಜನ ಸಾವನ್ನಪ್ಪಿದ್ದರು. ಇದೀಗ ಉತ್ತರ ಕಾಕಸಸ್‌ನ ಮಖಚ್ಕಲಾ ಮತ್ತು ಡರ್ಬೆಂಟ್ ನಗರಗಳಾದ್ಯಂತ ಅಂತಹದ್ದೇ ದಾಳಿಗಳು ಸಂಭವಿಸಿದೆ. ದಾಳಿಯ ಕೆಲವೇ ಸಮಯದಲ್ಲಿ ಮಖಚ್ಕಲಾದಲ್ಲಿ ನಾಲ್ವರು ಮತ್ತು ಡರ್ಬೆಂಟ್‌ನಲ್ಲಿ ಇಬ್ಬರು ಬಂದೂಕುಧಾರಿಗಳನ್ನು ಪೊಲೀಸರು ಹೊಡೆದುರಳಿಸಿದ್ದಾರೆ.

ಡಾಗೆಸ್ತಾನ್‌ನ ಅತಿದೊಡ್ಡ ನಗರ ಮಖಚ್ಕಲಾ ಮತ್ತು ಕರಾವಳಿ ನಗರ ಡರ್ಬೆಂಟ್‌ನಲ್ಲಿ ಏಕಕಾಲದಲ್ಲಿ ದಾಳಿಗಳು ನಡೆದಿದ್ದು, ಇದು ದೇಶಕ್ಕೆ ಕರಾಳ ದಿನವಾಗಿದೆ. ಈ ದಾಳಿಯನ್ನು ಭಯೋತ್ಪಾದಕ ದಾಳಿ ಎಂದು ಗವರ್ನರ್ ಸೆರ್ಗೆಯ್ ಮೆಲಿಕೋವ್ ತಿಳಿಸಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ತಿಳಿಸಿದ್ದಾರೆ.

ಈ ಭಯೋತ್ಪಾದಕ ದಾಳಿ ಹಿಂದೆ ಯಾರಿದ್ದಾರೆ? ಅವರು ಯಾವ ಉದ್ದೇಶ ಹೊಂದಿದ್ದಾರೆ? ಅನ್ನೋದು ಸ್ಪಷ್ಟವಾಗಿದೆ ಎಂದು ಪರೋಕ್ಷವಾಗಿ ಉಕ್ರೇನ್‌ ವಿರುದ್ಧ ಆರೋಪಿಸಿದ್ದಾರೆ.

ದಾಳಿ ಹಿಂದೆ ಯಾರಿದ್ದಾರೆ ಎಂದು ತಿಳಿಯಲು ಅಧಿಕಾರಿಗಳು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಡಾಗೆಸ್ತಾನ್​ ಸರ್ಕಾರ ಜೂನ್ 24ರಿಂದ 26ರ ವರೆಗೆ ಶೋಕಾಚರಣೆ ಘೋಷಿಸಿ ಆದೇಶ ಹೊರಡಿಸಿದೆ. ರಾಷ್ಟ್ರ ಧ್ವಜಗಳನ್ನು ಅರ್ಧಕ್ಕೆ ಇಳಿಸಲಾಗಿದೆ ಮತ್ತು ಎಲ್ಲ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

No Comments

Leave A Comment