ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಡೇವಿಡ್ ವಾರ್ನರ್ ವಿದಾಯ

T20 World Cup 2024: ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ 24 ರನ್​ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕೆರಿಯರ್ ಅಂತ್ಯಗೊಳಿಸಿದ್ದಾರೆ.ಈ ಬಾರಿಯ ಟಿ20 ವಿಶ್ವಕಪ್​ಗೂ ಮುನ್ನ ಡೇವಿಡ್ ವಾರ್ನರ್ ನಿವೃತ್ತಿಯ ಸೂಚನೆ ನೀಡಿದ್ದರು.

ಅಲ್ಲದೆ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದರು. ಆದರೆ ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಆಸ್ಟ್ರೇಲಿಯಾ ತಂಡದ ಲೆಕ್ಕಾಚಾರಗಳು ತಲೆಕೆಳಗಾಗಿದೆ. ಹೀಗಾಗಿ ಡೇವಿಡ್ ವಾರ್ನರ್ ನೋವಿನ ವಿದಾಯ ಹೇಳುವಂತಾಗಿದೆ.ಇದಕ್ಕೂ ಮುನ್ನ ಜನವರಿ 1, 2024 ರಂದು ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅಲ್ಲದೆ ಜನವರಿ 6 ರಂದು ಕೊನೆಯ ಪಂದ್ಯವಾಡುವ ಮೂಲಕ ಟೆಸ್ಟ್ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದರು. ಇದೀಗ ಟಿ20 ವಿಶ್ವಕಪ್​ ಮೂಲಕ ಚುಟುಕು ಕ್ರಿಕೆಟ್​ಗೂ ನಿವೃತ್ತಿ ಘೋಷಿಸಿದ್ದಾರೆ.

ಆಸ್ಟ್ರೇಲಿಯಾ ಪರ 110 ಟಿ20 ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್ 2300 ಎಸೆತಗಳನ್ನು ಎದುರಿಸಿ 3277 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಭರ್ಜರಿ ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.ಏಕದಿನ ಕ್ರಿಕೆಟ್​ನಲ್ಲಿ ಆಸೀಸ್ ಪರ 161 ಪಂದ್ಯಗಳಲ್ಲಿ 159 ಇನಿಂಗ್ಸ್ ಆಡಿರುವ ಡೇವಿಡ್ ವಾರ್ನರ್ 6932 ರನ್ ಕಲೆಹಾಕಿದ್ದಾರೆ. ಈ ವೇಳೆ 22 ಭರ್ಜರಿ ಶತಕ ಹಾಗೂ 33 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಏಕದಿನ ಕ್ರಿಕೆಟ್​ನಲ್ಲಿ ಆಸೀಸ್ ಪರ 161 ಪಂದ್ಯಗಳಲ್ಲಿ 159 ಇನಿಂಗ್ಸ್ ಆಡಿರುವ ಡೇವಿಡ್ ವಾರ್ನರ್ 6932 ರನ್ ಕಲೆಹಾಕಿದ್ದಾರೆ. ಈ ವೇಳೆ 22 ಭರ್ಜರಿ ಶತಕ ಹಾಗೂ 33 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಡೇವಿಡ್ ವಾರ್ನರ್ ಆಸ್ಟ್ರೇಲಿಯಾ ಪರ 112 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 205 ಇನಿಂಗ್ಸ್ ಆಡಿರುವ ಅವರು 3 ದ್ವಿಶತಕ, 26 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 8786 ರನ್ ಕಲೆಹಾಕಿದ್ದಾರೆ. ಈ ಮೂಲಕ ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ಪರ 3 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಆಗಿ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

 

kiniudupi@rediffmail.com

No Comments

Leave A Comment