ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಮಂಗಳೂರು, ಜೂನ್.25: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ಭೇಟಿ ನೀಡಿ ಮಹಾಪೂಜೆ, ಆಶ್ಲೇಷ ಬಲಿ ಪೂಜೆಯಲ್ಲಿ ಭಾಗಿಯಾದರು. ಕುಟುಂಬ ಸಮೇತರಾಗಿ ಆಗಮಿಸಿದ ಡಿಕೆ ಶಿವಕುಮಾರ್ ಅವರು ಆನೆ ಬಳಿ ಆಶೀರ್ವಾದ ಪಡೆದರು. ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವಾದ್ಯ ಮೇಳ ಕುಂಬ ಕಳಶದೊಂದಿಗೆ ಡಿಕೆಶಿಯನ್ನ ಸ್ವಾಗತಿಸಿದರು.
ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ನಾವು ಹಿಂದೂ ಧರ್ಮದವರು. ನಮ್ಮ ರಾಜ್ಯದಲ್ಲಿ ಎಲ್ಲಾ ಸಂಸ್ಕೃತಿಗಳನ್ನು ತೆಗೆದುಕೊಂಡು ಹೋಗೋರೋ. ಧಾರ್ಮಿಕ ದತ್ತಿ ಇಲಾಖೆಯನ್ನ ಇಟ್ಟುಕೊಂಡಿದ್ದೇವೆ. ಅವರವರ ನಂಬಿಕೆ ಪ್ರಕಾರ ಅವರವರು ಪ್ರಾರ್ಥನೆ ಮಾಡ್ತಾರೆ. ಬಹಳ ದಿನಗಳಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗಬೇಕೆಂಬ ಆಸೆ ಇತ್ತು. ಇವತ್ತು ಕುಟುಂಬ ಸಮೇತ ಬಂದಿದ್ದೇನೆ ಎಂದರು.