ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ

ಬೆಂಗಳೂರು, ಜೂನ್.25: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ  ಪೂರ್ವಭಾವಿ ಸಭೆ ನಡೆದಿದ್ದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಡಿಸೆಂಬರ್‌ 20ರಿಂದ 3 ದಿನಗಳ ಕಾಲ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ.20, 21 ಮತ್ತು 22ರಂದು ನಡೆಯಲಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಎಲ್ಲ‌ ರೀತಿ ಸಹಕಾರ ನೀಡುತ್ತೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಹೆಸರು ಶೀಘ್ರವೇ ಪ್ರಕಟಿಸುತ್ತೇವೆ. ಜಿಲ್ಲಾಡಳಿತ, ಸಾಹಿತ್ಯ ಪರಿಷತ್‌ನವರು ಕೆಲ ಹೆಸರುಗಳನ್ನು ನೀಡಿದ್ದಾರೆ. ಚರ್ಚೆ ಮಾಡಿ ಹೆಸರು ಅಂತಿಮಗೊಳಿಸಲಾಗುವುದು. ಎಲ್ಲರೂ ಸೇರಿ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ನೇಮಕ, ದಿನಾಂಕ ನಿಗದಿ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಇತರರಿದ್ದರು.

ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ದಿನಾಂಕವನನು ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಮಂಡ್ಯ ಲೋಕಸಭಾ ಕ್ಷೇತ್ರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಕ್ಷೇತ್ರ. 2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​ನ ಹೆಚ್​ಡಿ ಕುಮಾರಸ್ವಾಮಿಯವರು ಗೆದ್ದು ಬೀಗಿದ್ದರು. ಸದ್ಯ ಈಗ ಅವರು ಕೇಂದ್ರ ಸಚಿವರಾಗಿದ್ದಾರೆ. ಇದೀಗ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.

No Comments

Leave A Comment