ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಂಟೈನರ್ ಲಾರಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದಿದ್ದು, ಲಾರಿಯ ಕಂಟೈನರ್ ಹೆದ್ದಾರಿಯಲ್ಲಿ ಅಡ್ಡಲಾಗಿ ತಿರುಗಿ ನಿಂತ ಘಟನೆ ಉಪ್ಪಿನಂಗಡಿ ಬಳಿಯ ಕೂಟೇಲು ಎಂಬಲ್ಲಿ ಇಂದು ನಡೆದಿದೆ.

ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಸಾಗಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಈ ವೇಳೆ ಲಾರಿಯ ಹಿಂದಿನ ಕಂಟೈನರ್ ರಸ್ತೆಗೆ ಅಡ್ಡಲಾಗಿ ತಿರುಗಿ ನಿಂತಿದೆ. ಪರಿಣಾಮ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಇನ್ನು ಲಾರಿ ಚಾಲಕ ಆಸಿಫ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಹಾಗೂ ಪುತ್ತೂರು ಸಂಚಾರಿ ಪೊಲೀಸರು ಕ್ರೇನ್ ಮೂಲಕ ಲಾರಿಯನ್ನು ಮೇಲೆತ್ತಿಸಿದ್ದಾರೆ. ಈ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇನ್ನು ಅಪಘಾತದಲ್ಲಿ ಚರಂಡಿಯ ಬದಿಯಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ.ನ ಕುಡಿಯುವ ನೀರಿನ ಪೈಪ್ ಒಡೆದು ಹೋಗಿದೆ.

No Comments

Leave A Comment