ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಕೇಜ್ರಿವಾಲ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್; ದೆಹಲಿ ಸಿಎಂಗೆ ಜೈಲೇ ಗತಿ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ವಿಚಾರಣಾ ನ್ಯಾಯಾಲಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣಾ ನ್ಯಾಯಾಲದ ಆದೇಶ ತಡೆಹಿಡಿಯುವಂತೆ ಕೋರಿ ಜಾರಿ ನಿರ್ದೇಶನಾಲಯ ಮಾಡಿದ್ದ ಮನವಿಗೆ ದೆಹಲಿ ಹೈಕೋರ್ಟ್ ಪುರಸ್ಕರಿಸಿದೆ.
ಜಸ್ಟಿಸ್ ಸುಧೀರ್ ಕುಮಾರ್ ಜೈನ್ ಅವರ ಪೀಠ, ಜೂನ್ 20 ರಂದು ವಿಚಾರಣಾ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಜಾಮೀನು ಆದೇಶಕ್ಕೆ ತಡೆ ನೀಡಿದೆ.
ಟ್ರಯಲ್ ಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪೀಠವು ಜೂನ್ 21 ರಂದು ಆದೇಶ ಕಾಯ್ದಿರಿಸಿತ್ತು. ಇಂದು ತನ್ನ ತೀರ್ಪು ನೀಡಿದೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಮತ್ತೆ ಶರಣಾಗಿದ್ದರು.