ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
T20 World Cup 2024: ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ
T20 World Cup 2024: ಟಿ20 ವಿಶ್ವಕಪ್ ನಾಕೌಟ್ ಹಂತಕ್ಕೆ ಬಂದು ನಿಂತಿದೆ. 20 ತಂಡಗಳೊಂದಿಗೆ ಶುರುವಾದ ಟೂರ್ನಿಯು ಇದೀಗ 4 ತಂಡಗಳ ಕದನವಾಗಿ ಮಾರ್ಪಟ್ಟಿದೆ. ಅದರಂತೆ ನಾಕೌಟ್ ಹಂತದಲ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ.
ಈ ಪಂದ್ಯಗಳಿಗೂ ವೆಸ್ಟ್ ಇಂಡೀಸ್ನ ಕೆರಿಬಿಯನ್ ದ್ವೀಪಗಳ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ಮೊದಲ ಸೆಮಿ ಫೈನಲ್ ಟ್ರಿನಿಡಾಟ್-ಟೊಬಾಗೊದಲ್ಲಿ ನಡೆದರೆ, ಎರಡನೇ ಪಂದ್ಯವು ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ಜರುಗಲಿದೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ.
ಸೌತ್ ಆಫ್ರಿಕಾ vs ಅಫ್ಘಾನಿಸ್ತಾನ್: ಜೂನ್ 27 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಟ್ರಿನಿಡಾಡ್-ಟೊಬೊಗೊದ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 6 ಗಂಟೆಯಿಂದ ಶುರುವಾಗಲಿದೆ.
ಭಾರತ vs ಇಂಗ್ಲೆಂಡ್: ಜೂನ್ 27 ರಂದು ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.
ಈ ಎರಡು ಸೆಮಿಫೈನಲ್ನಲ್ಲಿ ಗೆಲ್ಲುವ ತಂಡಗಳು ಫೈನಲ್ಗೆ ಪ್ರವೇಶಿಸಲಿದ್ದು, ಅದರಂತೆ ಜೂನ್ 29 ರಂದು ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಅಂತಿಮ ಹಣಾಹಣಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ 9ನೇ ಆವೃತ್ತಿಯ ಟಿ20 ವಿಶ್ವಕಪ್ಗೆ ತೆರೆ ಬೀಳಲಿದೆ.