ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

T20 World Cup 2024: ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ

T20 World Cup 2024: ಟಿ20 ವಿಶ್ವಕಪ್ ನಾಕೌಟ್ ಹಂತಕ್ಕೆ ಬಂದು ನಿಂತಿದೆ. 20 ತಂಡಗಳೊಂದಿಗೆ ಶುರುವಾದ ಟೂರ್ನಿಯು ಇದೀಗ 4 ತಂಡಗಳ ಕದನವಾಗಿ ಮಾರ್ಪಟ್ಟಿದೆ. ಅದರಂತೆ ನಾಕೌಟ್ ಹಂತದಲ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ.

ಈ ಪಂದ್ಯಗಳಿಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ದ್ವೀಪಗಳ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ಮೊದಲ ಸೆಮಿ ಫೈನಲ್​ ಟ್ರಿನಿಡಾಟ್-ಟೊಬಾಗೊದಲ್ಲಿ ನಡೆದರೆ, ಎರಡನೇ ಪಂದ್ಯವು ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ಜರುಗಲಿದೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ.

ಸೌತ್ ಆಫ್ರಿಕಾ vs ಅಫ್ಘಾನಿಸ್ತಾನ್: ಜೂನ್ 27 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಟ್ರಿನಿಡಾಡ್​-ಟೊಬೊಗೊದ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 6 ಗಂಟೆಯಿಂದ ಶುರುವಾಗಲಿದೆ.

ಭಾರತ vs ಇಂಗ್ಲೆಂಡ್: ಜೂನ್ 27 ರಂದು ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.

ಈ ಎರಡು ಸೆಮಿಫೈನಲ್​ನಲ್ಲಿ ಗೆಲ್ಲುವ ತಂಡಗಳು ಫೈನಲ್​ಗೆ ಪ್ರವೇಶಿಸಲಿದ್ದು, ಅದರಂತೆ ಜೂನ್ 29 ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಅಂತಿಮ ಹಣಾಹಣಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ 9ನೇ ಆವೃತ್ತಿಯ ಟಿ20 ವಿಶ್ವಕಪ್​ಗೆ ತೆರೆ ಬೀಳಲಿದೆ.

kiniudupi@rediffmail.com

No Comments

Leave A Comment