ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕೊಡಗಿನಲ್ಲಿ ಮುಂದುವರಿದ ವರುಣಾರ್ಭಟ; ದುಬಾರೆ ಪ್ರವಾಸಿ ತಾಣಕ್ಕೆ ಎಂಟ್ರಿ ಬಂದ್

ಕೊಡಗು, ಜೂ.27: ಮಳೆಗಾಲ ಶುರುವಾಗುತ್ತಲೇ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ. ಹೌದು, ಮಡಿಕೇರಿ ನಗರದ ಹೃದಯ ಭಾಗದಲ್ಲಿಯೇ ಮುಖ್ಯ ರಸ್ತೆಯೊಂದು ಕುಸಿಯುತ್ತಿದೆ. ಇತ್ತ ಮುಂದುವರೆದ ಮಳೆಯ ಆರ್ಭಟಕ್ಕೆ ಕಾವೇರಿ ನದಿ ಪ್ರವಾಹ ಹಿನ್ನೆಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ.

ಭಾಗಮಂಡಲ ತ್ರಿವೇಣಿ ಸಂಗಮ‌ಜಲಾವೃತ

ಕೊಡಗಿನಾದ್ಯಂದ ಭಾರೀ ವರ್ಷ ಧಾರೆ ಹಿನ್ನೆಲೆ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಮಡಿಕೇರಿ ತಾಲೂಕಿನ ಭಾಗಮಂಡಲ ತ್ರಿವೇಣಿ ಸಂಗಮ‌ ಸಂಪೂರ್ಣ ಜಲಾವೃತವಾಗಿದ್ದು, ಪ್ರವಾಹದಲ್ಲಿ‌ ಸ್ನಾನ ಘಟ್ಟ ಮುಳುಗಡೆಯಾಗಿದೆ. ಇದರಿಂದ ಸ್ನಾನಘಟ್ಟದಲ್ಲಿ ಪವಿತ್ರ ಸ್ನಾನ ಮಾಡಲಾಗದೆ ಭಕ್ತರು ಪರದಾಟ ನಡೆಸಿದ್ದಾರೆ. ಜೊತೆಗೆ ಭಾಗಮಂಡಲ – ನಾಪೋಕ್ಲು ರಸ್ತೆ ಜಲಾವೃತವಾದರೂ ಮೇಲ್ಸೇತುವೆ ಇರುವುದರಿಂದ‌ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಿಲ್ಲ.

ಇನ್ನು ಭಾರಿ ಮಳೆಗೆ ಮಡಿಕೇರಿಯ ತ್ಯಾಗರಾಜ ಕಾಲೋನಿಯಲ್ಲಿ ಮೂರು ಮನೆಗಳಿಗೆ ಹಾನಿಯಾಗಿದ್ದು, ಮಳೆಯಿಂದ ಮನೆಯ ತಡೆಗೋಡೆ ಸಂಪೂರ್ಣ ಕುಸಿತವಾಗಿದೆ. ಇತ್ತ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಳೆ ಹೀಗೆ ಮುಂದುವರೆದರೆ ನಾಳೆಯ ವೇಳೆಗೆ ಸಂಗಮ ಜಲಾವೃತವಾಗುವ ಸಾಧ್ಯತೆಯಿದೆ. ಹಾಗೆಯೇ ಮಡಿಕೇರಿ ತಾಲ್ಲೂಕಿನ ಮೂರ್ನಾಡು ಗ್ರಾಮದ ಬಲಮುರಿಯಲ್ಲಿ ಹಳೆಯ ಸೇತುವೆ ಮುಳಗಡೆಯಾಗಿದೆ. ಸಂಚಾರಕ್ಕೆ ಹೊಸ ಸೇತುವೆ ಇರುವುದರಿಂದ ಸದ್ಯ ಜನರಿಗೆ ಯಾವುದೇ ಅಪಾಯವಿಲ್ಲ. ಇನ್ನು ಜಿಲ್ಲಾಡಳಿತ ನದಿ ತೀರದ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಮುನ್ನೆಚ್ಚರಿಕೆ ನೀಡಿದೆ.

No Comments

Leave A Comment