ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ರೇಣುಕಾಸ್ವಾಮಿ ಹತ್ಯೆ ಪ್ರಕರಣ: Instagram ಸಹಕಾರ ಕೋರಿದ ಕರ್ನಾಟಕ ಪೊಲೀಸರು!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತೆ ಪವಿತ್ರಾ ಗೌಡಸೇರಿದಂತೆ 15 ಮಂದಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆಗಾಗಿ Instagram ನ ಸಹಕಾರವನ್ನು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಮೃತ ರೇಣುಕಾಸ್ವಾಮಿ ಅವರು ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಕಳುಹಿಸಿರುವ ಸಂದೇಶಗಳ ಮಾಹಿತಿ ನೀಡುವಂತೆ Instagram ಗೆ ಮನವಿ ಮಾಡಿದ್ದಾರೆ.
ದರ್ಶನ್ ಅವರ ಅಭಿಮಾನಿಯಾಗಿರುವ ರೇಣುಕಾಸ್ವಾಮಿ ಅವರು ಪವಿತ್ರ ಗೌಡ ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವು ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರು, ನಂತರ ಅವರನ್ನು ಅಪಹರಿಸಿ, ಬರ್ಬರವಾಗಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು, ವ್ಯಾಪಕ ಪ್ರಯತ್ನಗಳ ಹೊರತಾಗಿಯೂ, ರೇಣುಕಾಸ್ವಾಮಿ ಅವರ ಮೊಬೈಲ್ ಫೋನ್ ಹುಡುಕುವಲ್ಲಿ ವಿಫಲರಾಗಿದ್ದಾರೆ ಮತ್ತು ಹೀಗಾಗಿ, Instagram ಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತನಿಖೆಯ ವೇಳೆ ಆರೋಪಿಯಿಂದ 70 ಲಕ್ಷ ರೂಪಾಯಿ ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ಆದಾಯ ತೆರಿಗೆ (ಐ-ಟಿ) ಇಲಾಖೆಗೆ ಪತ್ರ ಬರೆದಿದ್ದಾರೆ. ಯಾರಾದರೂ 10 ಲಕ್ಷಕ್ಕಿಂತ ಹೆಚ್ಚು ನಗದು ಹೊಂದಿದ್ದರೆ ಐಟಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಮೂಲಗಳು ತಿಳಿಸಿವೆ.
ಜೈಲಿನಲ್ಲಿರುವ ನಟ ದರ್ಶನ್ ಅವರ ನಿವಾಸದಲ್ಲಿ ಪೊಲೀಸರು 37.40 ಲಕ್ಷ ರೂ. ಮತ್ತೋರ್ವ ಆರೋಪಿಯಿಂದ 30 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದರು, ದರ್ಶನ್ ಅವರನ್ನು ರಕ್ಷಿಸಲು ರೇಣುಕಾಸ್ವಾಮಿ ಅವರ ಶವವನ್ನು ವಿಲೇವಾರಿ ಮಾಡಲು ಹಾಗೂ ಪೊಲೀಸರ ಮುಂದೆ ಶರಣಾಗಲು ಈ ಹಣ ಪಡೆದಿದ್ದರು ಎನ್ನಲಾಗಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ನಿವಾಸದಲ್ಲಿ 3 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.
ಏತನ್ಮಧ್ಯೆ, ಪ್ರಕರಣದಲ್ಲಿ ಬಂಧಿತರಾದ 17 ಆರೋಪಿಗಳ ಪೈಕಿ ನಾಲ್ವರನ್ನು ಬೆಂಗಳೂರು ಕೇಂದ್ರ ಕಾರಾಗೃಹದಿಂದ ತುಮಕೂರು ಜೈಲಿಗೆ ಅಧಿಕಾರಿಗಳು ಸ್ಥಳಾಂತರಿಸಿದ್ದಾರೆ. ಆರೋಪಿಗಳಾದ ರವಿಶಂಕರ್, ನಿಖಿಲ್, ಕೇಶವ್ ಮತ್ತು ಕಾರ್ತಿಕ್ ಅವರನ್ನು ತುಮಕೂರು ಜೈಲಿಗೆ ಸ್ಥಳಾಂತರಿಸಲಾಗಿದೆ. ಆರೋಪಿಗಳು ಪೊಲೀಸರ ಮುಂದೆ ತಪ್ಪೊಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಪರಸ್ಪರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದರು. ಎಲ್ಲ ಆರೋಪಿಗಳನ್ನು ಒಂದೇ ಕಡೆ ಇರಿಸುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ನಾಲ್ವರು ಆರೋಪಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಬುಧವಾರ ಚಿತ್ರದುರ್ಗದಲ್ಲಿ ಹೇಳಿಕೆ ನೀಡಿದ್ದಾರೆ.