ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಸೈಬರ್ ಕ್ರೈಂನಲ್ಲಿ ಭಾಗಿ ಆರೋಪ: ಶ್ರೀಲಂಕಾದಲ್ಲಿ 60 ಭಾರತೀಯರ ಬಂಧನ
ಕೊಲಂಬೊ: ಆನ್‌ಲೈನ್ ಹಣಕಾಸು ವಂಚನೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕನಿಷ್ಠ 60 ಭಾರತೀಯರನ್ನೊಳಗೊಂಡ ಗುಂಪನ್ನು ಶ್ರೀಲಂಕಾದ ಅಪರಾಧ ತನಿಖಾ ಇಲಾಖೆ ಬಂಧಿಸಿದೆ.
ಕೊಲಂಬೊದ ಉಪನಗರಗಳಾದ ಮಡಿವೇಲಾ ಮತ್ತು ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗೊಂಬೊದಿಂದ ಗುರುವಾರ ಭಾರತೀಯರನ್ನು ಬಂಧಿಸಲಾಗಿದೆ.
ಪೊಲೀಸ್ ವಕ್ತಾರ ಎಸ್‌ಎಸ್‌ಪಿ ನಿಹಾಲ್ ತಲ್ದುವಾ ಅವರ ಪ್ರಕಾರ, ಸಿಐಡಿ ಮಡಿವೇಲಾ, ಬಟ್ಟರಮುಲ್ಲಾ ಮತ್ತು ನೆಗೊಂಬೊ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, 135 ಮೊಬೈಲ್ ಫೋನ್‌ಗಳು ಮತ್ತು 57 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಸಂವಾದ ನಡೆಸಿ ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ಗ್ರೂಪ್ ಮೂಲಕ ಆಮಿಷವೊಡ್ಡಿದ್ದು, ಆಮಿಷಕ್ಕೆ ತುತ್ತಾಗಿ ವಂಚನೆಗೆ ಒಳಗಾದ ಸಂತ್ರಸ್ತೆ ನೀಡಿದ ದೂರ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಲ್ದುವಾ ಹೇಳಿದ್ದಾರೆ.
ಬಂಧಿತ ಆರೋಪಿಗಳು ದುಬೈ ಮತ್ತು ಅಫ್ಘಾನಿಸ್ತಾನದಲ್ಲಿ ಅಂತರರಾಷ್ಟ್ರೀಯ ಸಂಪರ್ಕಗಳನ್ನು ಹೊಂದಿದ್ದು, ಇವರೆಲ್ಲ ಹಣಕಾಸು ವಂಚನೆ, ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಗ್ ಸೇರಿದಂತೆ ಇನ್ನಿತರ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕೆ ಇದೆ. ಸ್ಥಳೀಯರು ಹಾಗೂ ವಿದೇಶಿಯರು ಸಹ ಇವರ ಮೋಸದ ಜಾಲಕ್ಕೆ ಬಿದ್ದಿರುವ ಸಾಧ್ಯತೆ ಇದೆ. ತನಿಖೆ ಪ್ರಗತಿಯಲ್ಲಿದೆ ಎಂದು ನಿಹಾಲ್ ತಲ್ದುವಾ ಅವರು ತಿಳಿಸಿದ್ದಾರೆ.