ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ ಎನ್.ಎಂ.ಧರ್ಮಪ್ಪರವರಿಗೆ ಬೀಳ್ಕೊಡುಗೆ ಸಮಾರಂಭ
ಉಡುಪಿ: ಮಂಗಳೂರು ವಿಭಾಗದ ರಾಜ್ಯ ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ ಎನ್.ಎಂ.ಧರ್ಮಪ್ಪರವರು ನಿವೃತ್ತಿ ಹೊಂದಿದ್ದು,ಅವರಿಗೆ ಬಿಳ್ಕೋಡುಗೆ ಸಮಾರಂಭ ಉಡುಪಿ ಶಾರದಾ ಇಂಟರ್ ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ಶನಿವಾರದ೦ದು ನಡೆಯಿತು.
ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ,ಮಂಗಳೂರು ನಗರ ಅಪರಾಧ ವಿಭಾಗದ ಡಿ.ಸಿ.ಪಿ ದಿನೇಶ್ ಕುಮಾರ್ ರವರು ಭಾಗವಹಿಸಿ ನಿವೃತ್ತಿ ಹೊಂದುತ್ತಿರುವವರಿಗೆ ಶುಭ ಹಾರೈಸಿರುತ್ತಾರೆ. ಕಾರ್ಯಕ್ರಮದಲ್ಲಿ ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರು ವಿಭಾಗಕ್ಕೆ ಒಳಪಡುವ ಮಂಗಳೂರು, ಉಡುಪಿ,ಚಿಕ್ಕಮಗಳೂರು ಕಾರವಾರ ಜಿಲ್ಲೆಗಳ ಅಧಿಕಾರಿ ಹಾಗೂ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.