ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ

ಕಾರ್ಕಳ:ಜೂ, 30.ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ.

ವೀರಪ್ಪ ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

46 ವರ್ಷದ ಹಂಸ ಮೊಯ್ಲಿ ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ತಿಳಿಸಿದೆ.

ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ತಮಿಳು ಚಿತ್ರವೊಂದರಲ್ಲಿಯೂ ಅಭಿನಯಿಸಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ‘ಶೃಂಗಾರಂ’ನಲ್ಲಿ ಅವರು ನಟಿಸಿದ್ದರು.

No Comments

Leave A Comment