ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಈಶಾನ್ಯ ಬೊರ್ನೊ ರಾಜ್ಯದಲ್ಲಿ ಬಾಂಬ್ ಸ್ಥೋಟ- 18ಮಂದಿ ದುರ್ಮರಣ
ಈಶಾನ್ಯ ಬೊರ್ನೊ ರಾಜ್ಯದಲ್ಲಿ ಶನಿವಾರ ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್ ಗಳ ಸರಣಿ ದಾಳಿಯಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗ್ವೋ ಜಾ ಪಟ್ಟಣದಲ್ಲಿ ಮದುವೆ, ಅಂತ್ಯಕ್ರಿಯೆ ಮತ್ತು ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿದೆ. ಈ ಪ್ರದೇಶದಲ್ಲಿ ದೀರ್ಘಕಾಲದಿಂದ ನಡೆಯುತ್ತಿರುವ ಇಸ್ಲಾಮಿಸ್ಟ್ ದಂಗೆಯ ನಡುವೆ ಈ ಸ್ಫೋಟ ನಡೆದಿದೆ.
ಬೋರ್ನೊ ಈ 15 ವರ್ಷ ಗಳ ಸಂಘರ್ಷದ ಕೇಂದ್ರಬಿಂದುವಾಗಿದೆ. ಈ ದಂಗೆ ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಂಡಿದೆ ಮತ್ತು ಲಕ್ಷಾಂತರ ಜನರ ಸ್ಥಳಾಂತರಕ್ಕೆ ಕಾರಣವಾಗಿದೆ.
ನೈಜೀರಿಯಾದ ಮಿಲಿಟರಿಯು ಉಗ್ರಗಾಮಿ ಗುಂಪುಗಳನ್ನು ದುರ್ಬಲಗೊಳಿಸಿದೆ, ಈ ಗುಂಪುಗಳು ನಾಗರಿಕರು ಮತ್ತು ಭದ್ರತಾ ಪಡೆಗಳ ಮೇಲೆ ಮಾರಣಾಂತಿಕ ದಾಳಿಗಳನ್ನು ನಡೆಸುತ್ತಿದ್ದಾರೆ.
ಬೊರ್ನೊ ಸ್ಟೇ ಟ್ ಎಮರ್ಜೆನ್ಸಿ ಮ್ಯಾನೇಜ್ಮೆಂಟ್ ಏಜೆನ್ಸಿಯ ಮುಖ್ಯಸ್ಥ ಬಾರ್ಕಿಂ ಡೋ ಸೈದು ಅವರು , ಸರಣಿ ಸ್ಪೋ ಟದಲ್ಲಿ ಮಕ್ಕಳು, ವಯಸ್ಕರು ಮತ್ತು ಗರ್ಭಿಣಿಯರ ಒಳಗೊಂಡಿರುವ ಸಾವುಗಳನ್ನು ದೃಢಪಡಿಸಿದ್ದಾರೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ದಾಳಿಯ ಹೊಣೆಯನ್ನು ಯಾವುದೇ ಗುಂಪು ಇನ್ನೂ ಹೊತ್ತುಕೊಂಡಿಲ್ಲ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದಿದ್ದಾರೆ.