ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ದಿಲ್ಲಿಯಲ್ಲಿ ಭಾರೀ ಮಳೆ: ಎರಡು ದಿನದಲ್ಲಿ 11 ಮಂದಿ ಮೃತ್ಯು
ಹೊಸದಿಲ್ಲಿ: ದಿಲ್ಲಿಯಲ್ಲಿ ಸುರಿಯುತ್ತಿರುವ ಮಳೆಗೆ ಎರಡೇ ದಿನಗಳ ಅಂತರದಲ್ಲಿ ಒಟ್ಟು 11 ಮಂದಿ ಬಲಿಯಾಗಿದ್ದಾರೆ.
ಶನಿವಾರ ಒಂದೇ ದಿನ ನಡೆದಿರುವ ಮಳೆ ಸಂಬಂಧಿ ಅವಘಡಗಳಲ್ಲಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ
ಮುಂಗಾರು ಮಳೆಯ ಅವಾಂತರಗಳನ್ನು ಎದುರಿಸಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರಗಳು ತಿಳಿಸಿದ್ದರೂ, ರಸ್ತೆಗಳು ಜಲಾವೃತಗೊಂಡಿರುವುದರಿಂದ ಈವರೆಗೆ ಒಟ್ಟು 11 ಮಂದಿ ಮೃತಪಟ್ಟಿದ್ದಾರೆ.ಶನಿವಾರ ವಾಯುವ್ಯ ದಿಲ್ಲಿಯ ಜಲಾವೃತಗೊಂಡಿದ್ದ ಸುರಂಗ ಮಾರ್ಗದಲ್ಲಿ ಸಿಲುಕಿ ಓರ್ವ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುರಂಗ ಮಾರ್ಗವು ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ಜಲಾವೃತಗೊಂಡಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. ಜಲಾವೃತಗೊಂಡಿದ್ದ ಸುರಂಗ ಮಾರ್ಗದಲ್ಲಿ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ 60 ವರ್ಷದ ದಿಗ್ವಿಜಯ್ ಕುಮಾರ್ ಚೌಧರಿ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಅವರು ದಿಲ್ಲಿಯ ಜೈತ್‌ಪುರ್ ನಿವಾಸಿಯಾಗಿದ್ದಾರೆ.
ಶುಕ್ರವಾರ ಸುರಿದ ಭಾರಿ ಮಳೆಯ ಕಾರಣಕ್ಕೆ ನಿರ್ಮಾಣ ಹಂತದಲ್ಲಿದ್ದ ಗೋಡೆ ಕುಸಿದು ಬಿದ್ದು ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ಕಟ್ಟಡದ ಅವಶೇಷಗಳಡಿಯಿಂದ ಶನಿವಾರ ಬೆಳಗ್ಗೆ ಹೊರ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.