ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ ನಿಧನ
ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಇವರು ಉತ್ತಮ ಕೃಷಿಕರಾಗಿದ್ದರು.ಪೂಜಾರಿಯವರು ತನ್ನ ರಾಜಕೀಯ ಜೀವನದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುವ ಪ್ರತಿ ಸಂದರ್ಭ ತಾಯಿ ವಾಸವಿರುವ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಚುನಾವಣೆಯಲ್ಲೂ ತಾಯಿಯೊಂದಿಗೆ ಆಗಮಿಸಿ ಮತ ಚಲಾಯಿಸುತ್ತಿದ್ದರು. ತನ್ನ ಯಶಸ್ವಿನಲ್ಲಿ ತಾಯಿಯ ಪಾತ್ರ ಮಹತ್ವದಿದ್ದೆ ಎಂದು ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದರು.
ಇವರ ಅಗಲುವಿಕೆಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ.ಕುಂದರ್ ಸಹಿತ ರಾಜ್ಯ, ರಾಷ್ಟ್ರ ಮಟ್ಟದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.