ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು

ಬೆಂಗಳೂರು, ಜು.01,ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರಾಗಿದೆ.

ದೇವರಾಜೇ ಗೌಡ ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಜಿ ಉಮಾ ಅವರಿದ್ದ ಏಕಸದಸ್ಯ ಪೀಠ ಜಾಮೀನು ನೀಡಿ ಇಂದು ಆದೇಶ ನೀಡಿದೆ.

ಈ ಹಿಂದೆ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ದೇವರಾಜೇ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದನ್ನು ಪ್ರಶ್ನಿಸಿ ದೇವರಾಜೇಗೌಡ ಅವರು ಹೈಕೋರ್ಟ್‍ಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಬಿಡುಗಡೆ ಮಾಡಿರುವ ಆರೋಪ ಎದುರಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಮುಖಂಡ, ವಕೀಲ ದೇವರಾಜೇ ಗೌಡ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿತ್ತು. ಮಹಿಳೆಯೊಬ್ಬರ ಮೇಲೆ ದೇವರಾಜೇ ಗೌಡ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

No Comments

Leave A Comment