Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕಲಬುರಗಿ: ಡಿಜೆ ಸಾಂಗ್​ಗೆ ಡ್ಯಾನ್ಸ್ ಮಾಡಿದ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

ಕಲಬುರಗಿ, ಜುಲೈ 2: ಡಿಜೆ ಸಾಂಗ್​ಗೆ ಡ್ಯಾನ್ಸ್ ಮಾಡಿದ ವಿಚಾರವಾಗಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಹಲವು ಮಂದಿ ಗಾಯಗೊಂಡ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಯುವಕರ ತಂಡವೊಂದು ಸ್ನೇಹಿತನ ಮದುವೆ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಡ್ಯಾನ್ಸ್ ಮಾಡುತ್ತಿತ್ತು. ರಾಮಮಂದಿರ ಕುರಿತ ಹಾಡಿಗೆ ಡ್ಯಾನ್ಸ್ ಮಾಡಿದ್ದಕ್ಕೆ ಇನ್ನೊಂದು ಕೋಮಿನವರು ಆಕ್ಷೇಪ ತೆಗೆದಿದ್ದಾರೆ. ಸಂಘರ್ಷ ವಿಕೋಪಕ್ಕೆ ಹೋಗಿದ್ದು, ಭೀಮಾಶಂಕರ್ ಎಂಬವರ ಮೇಲೆ ಅನ್ಯಕೋಮಿನ ಯುವಕರ ಗುಂಪು ಹಲ್ಲೆ ನಡೆಸಿದೆ.

ಇದೀಗ, ಘಟನೆ ಬಗ್ಗೆ ಭೀಮಾಶಂಕರ್ ತಾಯಿ ಮಾತನಾಡಿದ್ದು, ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘರ್ಷಣೆ ನಡೆದಿದೆ.

ಕೆಲವೇ ಕೆಲವು ದಿನಗಳ ಹಿಂದೆ ಕೋಲಾರ ನಗರದ ಅರಹಳ್ಳಿ ಗೇಟಿ ಬಳಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿತ್ತು. ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಪ್ರಯುಕ್ತ ಮೆರವಣಿಗೆ ನಡೆಯುತ್ತಿದ್ದಾಗ ಮಸೀದಿ ಎದುರು ಡಿಜೆ ಸೌಂಡ್ ಹಾಕಿಕೊಂಡು ಹೋಗಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು.

ಅದಕ್ಕೂ ಕೆಲವು ದಿನಗಳ ಮುನ್ನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಬೋಳಿಯಾರ್​ ಎಂಬಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗುತ್ತಾ ದ್ವಿಚಕ್ರ ವಾಹನದಲ್ಲಿ ತೆರಳಿದವರ ಬೆನ್ನಟ್ಟಿ ಚೂರಿಯಿಂದ ಇರಿಯಲಾಗಿತ್ತು. ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ವಾಪಸಾಗುತ್ತಿದ್ದವರ ಮೇಲೆ ಚೂರಿಯಿಂದ ಇರಿಯಲಾಗಿತ್ತು.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಇಂಥ ಘಟನೆಗಳು ನಡೆಯುತ್ತಿರುವುದು ಕಾನೂನು ಸುವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

No Comments

Leave A Comment