ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಉತ್ತರ ಪ್ರದೇಶದ ಹಾಥರಸ್ನಲ್ಲಿ ಸತ್ಸಂಗ ವೇಳೆ ಕಾಲ್ತುಳಿತ: 50ಕ್ಕಿಂತಲೂ ಹೆಚ್ಚು ಮಂದಿ ಸಾವು
ಹಾಥರಸ್ (ಉತ್ತರ ಪ್ರದೇಶ) ಜುಲೈ 02: ಮಂಗಳವಾರ ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 23 ಮಹಿಳೆಯರು, ಮೂವರು ಮಕ್ಕಳು ಮತ್ತು ಒಬ್ಬ ಪುರುಷ ಸೇರಿದಂತೆ ಕನಿಷ್ಠ 27 ಜನರು ಸಾವಿಗೀಡಾಗಿದ್ದಾರೆ. ಹಾಥರಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದ ರಾತಿ ಭನ್‌ಪುರ್ ಗ್ರಾಮದಲ್ಲಿ ವಿಶೇಷವಾಗಿ ಹಾಕಲಾದ ಟೆಂಟ್‌ನಲ್ಲಿ ಧಾರ್ಮಿಕ ಬೋಧಕರೊಬ್ಬರು ತಮ್ಮ ಅನುಯಾಯಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ.
ಹೆಚ್ಚಿನ ಜನರು ‘ಸತ್ಸಂಗ’ದಲ್ಲಿ ಭಾಗವಹಿಸಿದ್ದರಿಂದ ಅಲ್ಲಿ ಉಸಿರುಗಟ್ಟಿ ಜನರಲ್ಲಿ ಅಸ್ವಸ್ಥತೆಗೆ ಕಾರಣವಾಯಿತು ಎಂದು ತೋರುತ್ತದೆ. ಆಗ ಜನರು ಹೊರಗೆ ಓಡಲು ಆರಂಭಿಸಿದ್ದರಿಂದ ಕಾಲ್ತುಳಿತ ಉಂಟಾಯಿತು. ಕಾರ್ಯಕ್ರಮದ ಸಮಯದಲ್ಲಿ ಭಾರೀ ಸೆಖೆ ಇತ್ತು ಎಂದು ಪೊಲೀಸರು ಹೇಳಿದ್ದಾರೆ.
ಅದು ಧಾರ್ಮಿಕ ಬೋಧಕ ಭೋಲೆ ಬಾಬಾರ ಸತ್ಸಂಗ ಸಭೆ. ಮಂಗಳವಾರ ಮಧ್ಯಾಹ್ನ ಇಟಾಹ್ ಮತ್ತು ಹಾಥರಸ್ ಜಿಲ್ಲೆಯ ಗಡಿಯಲ್ಲಿರುವ ಸ್ಥಳದಲ್ಲಿ ಒಟ್ಟುಗೂಡಲು ತಾತ್ಕಾಲಿಕ ಅನುಮತಿಯನ್ನು ನೀಡಲಾಗಿದೆ ಎಂದು ಇನ್ಸ್‌ಪೆಕ್ಟರ್ ಜನರಲ್ (ಅಲಿಘರ್ ರೇಂಜ್) ಶಲಭ್ ಮಾಥುರ್ ಹೇಳಿದ್ದಾರೆ.
ಹಾಥರಸ್‌ನ ಗಂಗಾ ದೇವಿ (70), ಕಾಸ್‌ಗಂಜ್‌ನ ಪ್ರಿಯಾಂಕಾ (20), ಮಥುರಾದ ಜಸೋದಾ (70) ಮತ್ತು ಇಟಾಹ್‌ನ ಸರೋಜ್ ಲತಾ (60) ಮೃತರೆಂದು ಗುರುತಿಸಲಾಗಿದೆ. ಮೃತ ಇಬ್ಬರು ಮಕ್ಕಳನ್ನು ಕಾವ್ಯ (4) ಮತ್ತು ಆಯುಷ್ (8) ಎಂದು ಗುರುತಿಸಲಾಗಿದ್ದು ಇಬ್ಬರೂ ಶಹಜಾನ್‌ಪುರದವರು.
ಧಾರ್ಮಿಕ ಕಾರ್ಯಕ್ರಮ ಮುಗಿದಾಗ ಎಲ್ಲರೂ ಹೊರಗೆ ಹೋಗುವ ಅವಸರದಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಸಂತ್ರಸ್ತರೊಬ್ಬರು ಹೇಳಿದ್ದಾರೆ.
ಸ್ಥಳದಲ್ಲಿ ಅಪಾರ ಸಂಖ್ಯೆಯ ಅನುಯಾಯಿಗಳು ಜಮಾಯಿಸಿದ್ದರು. ಯಾವುದೇ ದಾರಿಯಿಲ್ಲ, ಎಲ್ಲರೂ ಒಬ್ಬರ ಮೇಲೆ ಬಿದ್ದುಬಿಟ್ಟರು, ಆಗ ಕಾಲ್ತುಳಿತ ನಡೆಯಿತು. ನಾನು ಹೊರಗೆ ಹೋಗಲು ಪ್ರಯತ್ನಿಸಿದಾಗ, ಹೊರಗೆ ಮೋಟಾರು ಸೈಕಲ್‌ಗಳನ್ನು ನಿಲ್ಲಿಸಿದ್ದರಿಂದ ಅಲ್ಲಿ ದಾರಿ ಇರಲಿಲ್ಲ. ಹಲವರು ಮೂರ್ಛೆ ಹೋದರು. ಕೆಲವರು ಸತ್ತರು ”ಎಂದು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾದ ಸಂತ್ರಸ್ತರು ಹೇಳಿದ್ದಾರೆ.
ಘಟನೆಗೆ ನಿಖರ ಕಾರಣ ಏನು ಎಂಬುದನ್ನು ತನಿಖೆ ನಡೆಸಲಾಗುತ್ತಿದೆ.
ಏತನ್ಮಧ್ಯೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಹಾಥರಸ್ ಜಿಲ್ಲೆ ಮತ್ತು ಸುತ್ತಮುತ್ತಲಿನ ಅಧಿಕಾರಿಗಳಿಗೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ವೇಗಗೊಳಿಸಲು ಸೂಚಿಸಿದ್ದಾರೆ. “ಅವರು ಎಡಿಜಿ ಆಗ್ರಾ ಮತ್ತು ಕಮಿಷನರ್ ಅಲಿಘರ್ ನೇತೃತ್ವದಲ್ಲಿ ಘಟನೆಯ ಕಾರಣಗಳನ್ನು ತನಿಖೆ ಮಾಡಲು ಸೂಚನೆಗಳನ್ನು ನೀಡಿದ್ದಾರೆ” ಎಂದು ಸಿಎಂ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.