Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಶಾಕಿಂಗ್! ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಫಸ್ಟ್​ ಪಿಯು ವಿದ್ಯಾರ್ಥಿನಿ, ಇಷ್ಟಕ್ಕೆಲ್ಲಾ ಕಾರಣ ಯಾರು?

ಕೋಲಾರ:ಜುಲೈ 2: ಅಪ್ರಾಪ್ತ ಬಾಲಕಿ ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ.

ಸದ್ಯ  ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಮಗು ಕರುಣಿಸಿದ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಅಚ್ಚರಿ ಏನಂದರೆ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ. ವಿದ್ಯಾರ್ಥಿನಿಗೆ ತಾನು ಗರ್ಭಿಣಿ ಎನ್ನುವುದು ಗೊತ್ತೇ ಇರಲಿಲ್ವಾ? ಅಥವಾ ಮನೆಯಲ್ಲಿ ಪೋಷಕರು, ಬಾಲಕಿಯ ದೇಹದಲ್ಲಿ ಬದಲಾವಣೆ ಗಮನಿಸಿಲ್ವಾ ಅಂತ?  ಹೀಗೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿವೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಂತ್ರಸ್ತ ವಿದ್ಯಾರ್ಥಿನಿಯ ಮಾಹಿತಿ ಮೇರೆಗೆ ಇದಕ್ಕೆ ಕಾರಣವಾದವನ್ನು ಬಂಧನಕ್ಕೆ ಬಲೆ ಬೀಸಿದ್ದಾರೆ. ಏನೇ ಆಗಲಿ ಓದುವ, ಆಡುವ ವಯಸ್ಸಿನಲ್ಲಿ ಬಾಲಕಿ ಮಗುವಿಗೆ ಜನ್ಮ ನೀಡಿರುವುದು ದುರಂತ. ಅದಕ್ಕೆ ಯುವತಿಯರು ಅಪ್ರಾಪ್ತ ವಯಸ್ಸಿನಲ್ಲೇ ಪ್ರೀತಿ ಪ್ರೇಮ ಎನ್ನುವ ಹುಚ್ಚಾಟಕ್ಕೆ ಹೋಗಬಾರದು.

ಹಾಸ್ಟೆಲ್​ನಲ್ಲೇ ಮಗುವಿಗೆ ಜನ್ಮ ನೀಡಿದ್ದ ವಿದ್ಯಾರ್ಥಿನಿ

ಇನ್ನು ಕಳೆದ ವರ್ಷದ ಅಂದರೆ 2023 ಡಿಸೆಂಬರ್​​ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಹಾಸ್ಟೆಲ್​ನಲ್ಲೇ ಮಗುವಿಗೆ ಜನ್ಮ ನೀಡಿರುವ ಪ್ರಕರಣ ಕಲಬುರಗಿಯಲ್ಲಿ ಬೆಳಕಿಗೆ ಬಂದಿತ್ತು. ಬಳಿಕ ನವಜಾತ ಮಗುವಿನೊಂದಿಗೆ ವಿದ್ಯಾರ್ಥಿಯನ್ನು ಕಲಬುರಗಿಯ ಅಮೂಲ್ಯ ಶಿಶು ಗೃಹಕ್ಕೆ ದಾಖಲಿಸಲಾಗಿತ್ತು. ನಂತರ ಪೊಲೀಸರು ಪ್ರರಕಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಬಾಲಕಿ ಮಗುವಿಗೆ ಜನ್ಮ ನೀಡಲು ಕಾರಣವಾದವನು ಅಪ್ರಾಪ್ತೆಯ ಸೋದರ ಸಂಬಂಧಿ ಎನ್ನುವುದು ಗೊತ್ತಾಗಿದೆ. ಬಳಿಕ ಆತನನ್ನು ಪತ್ತೆ ಮಾಡಿ ಪೊಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಿದ್ದರು.

No Comments

Leave A Comment