ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್: ಪೋಷಕರ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್ ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ.
ದರ್ಶನ್ ಮೇಲಿನ ಅಂಧಭಿಮಾನ ಪ್ರದರ್ಶನಕ್ಕೆ ಮುಂದಾಗಿ ಕಾನೂನಿನ ಕುಣಿಕೆಗೆ ಈಗ ಪೋಷಕರು ತಗ್ಲಾಕಿಕೊಂಡಿದ್ದಾರೆ. ಈ ವಿಚಾರ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದೆ. ಈಗ ಪೊಲೀಸ್ ಇಲಾಖೆಯ ಮೂಲಕ ಪೋಷಕರ ಪತ್ತೆ ಕಾರ್ಯಕ್ಕೆ ಮುಂದಾಗಿದೆ.
ಮಾಧ್ಯಮದವರ ಮುಂದೆ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಪ್ರತಿಕ್ರಿಯಿಸಿ, ಈ ರೀತಿ ಫೋಟೋ ಶೂಟ್ ಮಾಡಿಸಿರುವುದು ನಿಜಕ್ಕೂ ಖಂಡನೀಯ. ಹೀಗಾಗಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ. ಈ ಬಗ್ಗೆ ಇವತ್ತು ಪೊಲೀಸ್ ಇಲಾಖೆ ಐಟಿ ಸೆಲ್ ಪತ್ರ ಬರೆಯಲಾಗುತ್ತದೆ. ಪೋಟೋ ಶೂಟ್ ಮಾಡಿಸಿದವರ ಪತ್ತೆ ಮಾಡಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಈ ಫೋಟೋ ಶೂಟ್ ಪ್ರಕರಣವನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಇದು ಬಾಲ ನ್ಯಾಯ ಕಾಯ್ದೆಯ ಸ್ಪಷ್ಟ ಉಲ್ಲಂಘನೆ. ಕಾನೂನಿನಡಿ ಯಾವೆಲ್ಲ ಕ್ರಮಗಳಿಗೆ ಸಾಧ್ಯತೆ ಇದೆಯೋ ಅದೆಲ್ಲವನ್ನೂ ಕೈಗೊಳ್ಳುತ್ತೇವೆ ಎಂದರು.