ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕೃಷ್ಣಗೆ ರಿಲೀಫ್ ನೀಡಿದ ಕೋರ್ಟ್
ಬೆಂಗಳೂರು;ಜು ,3; ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪೊಲೀಸರು ದಾಖಲಿಸಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆಯಡಿಯ ಪ್ರಕರಣವನ್ನು ರದ್ದುಗೊಳಿಸಿದೆ.
ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿದರು.
ಇನ್ನು ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ವಾದ ಮಂಡಿಸಿದ್ದು, ‘ಜಾಮೀನು ಸಿಗದಂತೆ ಮಾಡಲು ಕೆಸಿಒಸಿ ಕಾಯ್ದೆ ಅನ್ವಯಿಸಲಾಗಿದೆ ಎಂದರು. ಈ ಹಿನ್ನಲೆ ಸಂಘಟಿತ ಅಪರಾಧ ಕಾಯ್ದೆ ಅನ್ವಯಿಸಿದ್ದನ್ನು ರದ್ದುಪಡಿಸಿದ ಹೈಕೋರ್ಟ್ ವ್ಯಾಪ್ತಿಯಿರುವ ನ್ಯಾಯಾಲಯ ಶೀಘ್ರ ಜಾಮೀನು ಅರ್ಜಿ ತೀರ್ಮಾನಿಸಬೇಕು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ.
ಇನ್ನು ಕಳೆದ ಜೂ.27 ರಂದು ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿಗೆ ಹೈಕೋರ್ಟ್ ಏಕಸದಸ್ಯ ಪೀಠ ನಿರೀಕ್ಷಣಾ ಜಾಮೀನು ನೀಡಿತ್ತು.