ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
‘ನನ್ನ ಮುಂದಿನ ಜೀವನಕ್ಕೆ ತೊಂದರೆ ಆಗದಿರಲಿ’; ದರ್ಶನ್‌ಗೆ ನಾನೊಬ್ಬಳೆ ಪತ್ನಿ ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮಿ ಪತ್ರ!
ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 15ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು ಸದ್ಯ ಆರೋಪಿಗಳು ಪರಪ್ಪರನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು ದರ್ಶನ್ ಪತ್ನಿ ಎಂದು ಹೇಳಿದ್ದರು.
ಈ ಹೇಳಿಕೆ ಕುರಿತಂತೆ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಪತ್ರ ಬರೆದಿದ್ದು ಸುದ್ದಿಗೋಷ್ಠಿಯಲ್ಲಿ ನೀವು ದರ್ಶನ್ ರ ಎರಡನೇ ಪತ್ನಿ ಪವಿತ್ರಾ ಗೌಡ ಎಂದು ತಪ್ಪಾಗಿ ಹೇಳಿದ್ದೀರಿ. ಹೀಗಾಗಿ ರಾಷ್ಟ್ರಮಟ್ಟದ ಮಾಧ್ಯಮಗಳು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ದಂಪತಿ ಬಂಧನ ಅಂತ ಸುದ್ದಿ ಮಾಡಿವೆ. ಇದು ನನ್ನ ಮತ್ತು ನನ್ನ ಮಗ ವಿನೀಶ್ ಗೆ ಮುಂದಿನ ದಿನಗಳಲ್ಲಿ ತೊಂದರೆ ಆಗಬಾರದು. ಪೊಲೀಸ್ ದಾಖಲೆಗಳಲ್ಲಿ ಈ ಮಾಹಿತಿ ಸ್ಪಷ್ಟವಾಗಿರಲಿ. ಇದರಿಂದ ನನಗೆ ಭವಿಷ್ಯದಲ್ಲಿ ತೊಂದರೆ ಆಗದಿರಲಿ ಎಂದು ಪತ್ರದಲ್ಲಿ ವಿಜಯಲಕ್ಷ್ಮಿ ಮನವಿ ಮಾಡಿಕೊಂಡಿದ್ದಾರೆ.
ಪವಿತ್ರಾಗೌಡ ದರ್ಶನ್ ಪತ್ನಿಯಲ್ಲ ಆಕೆ ನನ್ನ ಗಂಡನ ಸ್ನೇಹಿತೆ ಅಷ್ಟೆ. ದರ್ಶನ್ ಅವರನ್ನು ನಾನು ಮಾತ್ರ ಕಾನೂನಾತ್ಮಕವಾಗಿ ಮದುವೆ ಆಗಿದ್ದೇನೆ. ನಮ್ಮ ಮದುವೆ 2003ರ ಮೇ 19ರಂದು ಧರ್ಮಸ್ಥಳದಲ್ಲಿ ನಡೆದಿತ್ತು ಎಂದು ವಿಜಯಲಕ್ಷ್ಮಿ ಅವರು ಈ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.