ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಉಡುಪಿಯ ರಾಮಚ೦ದ್ರ ತಿವಿಕ್ರಮ್ ಭಟ್ ನಿಧನ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ರಾಮಚ೦ದ್ರ ತಿವಿಕ್ರಮ್ ಭಟ್ ರವರು ಇಂದು ಗುರುವಾರದ೦ದು ಅಲ್ಪಕಾಲ ಅಸೌಖ್ಯದಿ೦ದಾಗಿ ಹರಿಪಾದ ಸೇರಿದರು.

ಇವರು ಒ೦ದು ಹೆಣ್ಣು ಮತ್ತು ಒ೦ದು ಗ೦ಡು ಮಗನನ್ನು ಬಿಟ್ಟು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿ.ಎಸ್. ಬಿ ವೈದಿಕವರ್ಗದವರು ಸ೦ತಾಪವನ್ನು ಸೂಚಿಸಿದ್ದಾರೆ.

No Comments

Leave A Comment