ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ....ಖಾಸಗಿ ಬಸ್-ಆಟೋರಿಕ್ಷಾ ನಡುವೆ ಡಿಕ್ಕಿ:ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಜೂನ್ 12 ರಂದು ಸಂಭವಿಸಿದೆ...

ಮುಡಾ ಹಗರಣ ಸಿಬಿಐಗೆ ಕೊಡುವ ಪ್ರಕರಣವೇ ಅಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕೆಂಬ ಬಿಜೆಪಿಯ ಬೇಡಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಸಿಬಿಐಗೆ ಕೊಡುವ ಪ್ರಕರಣ ಅಲ್ಲ ಎಂದು ಗುರುವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಮುಡಾ ಹಗರಣದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ನನ್ನ ಅವಧಿಯಲ್ಲಿ 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ನಾವು ಹಲವು ಪ್ರಕರಣ ಸಿಬಿಐಗೆ ಕೊಡುವಂತೆ ಕೇಳಿದ್ದೆವು. ಅವರೇನಾದ್ರು(ಬಿಜೆಪಿಯವರು) ಒಂದಾದ್ರು ಕೊಟ್ಟಿದ್ರಾ? ಎಂದು ಪ್ರಶ್ನಿಸಿದರು.

“ಇದು ಸಿಬಿಐಗೆ ಕೊಡುವ ಪ್ರಕರಣ ಅಲ್ಲ. ಮುಡಾ ಹಗರಣ ಆರೋಪದ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಹಾಗಂತ, ಎಲ್ಲವನ್ನೂ ಸಿಬಿಐ ಗೆ ಕೊಡಲು ಸಾಧ್ಯವಿಲ್ಲ. ಬಿಜೆಪಿಗರು ಕೇಳ್ತಾರೆ ಅಂತಾ ಎಲ್ಲವನ್ನೂ ಸಿಬಿಐ ಗೆ ಕೊಡಲು ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

kiniudupi@rediffmail.com

No Comments

Leave A Comment