ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಜು.18ರ ತನಕ ದರ್ಶನ್​, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್​, ನಟಿ ಪವಿತ್ರಾ ಗೌಡ ಮುಂತಾದವರಿಗೆ ಸಂಕಷ್ಟ ಹೆಚ್ಚಾಗಿದೆ. ಇಂದು (ಜುಲೈ 4) ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್​ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಯಿತು. ಆರ್ಥಿಕ ಅಪರಾಧಗಳ ಕೋರ್ಟ್​ಗೆ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಆಗಿದೆ. ಜುಲೈ 18ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.

ಕೊಲೆ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್​ ಹಾಗೂ ಅವರ ಸಹಚರರಿಗೆ ಜೈಲೇ ಗತಿಯಾಗಿದೆ. ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಲ್ಲಿ ಇರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್​ನಲ್ಲಿ ಹಾಜರು ಪಡಿಸಲಾಯಿತು. ಜಡ್ಜ್ ಎಲ್ಲರ ಹೆಸರು ಕರೆಯುತ್ತಿದ್ದಂತೆಯೇ ಕೈಎತ್ತಿ ಹಾಜರಿ ಖಾತರಿಪಡಿಸಿದರು. ದರ್ಶನ್​ ಅವರು ಜೈಲಿನಿಂದ ಹೊರಬರಲಿ ಎಂಬುದು ಅಭಿಮಾನಿಗಳು ಮತ್ತು ಆಪ್ತರ ಬಯಕೆ ಆಗಿದೆ. ಆದರೆ ಇದು ಗಂಭೀರ ಪ್ರಕರಣ ಆದ್ದರಿಂದ ಜಾಮೀನು ಸಿಗುವುದು ಸದ್ಯಕ್ಕೆ ಕಷ್ಟವಾಗಿದೆ.

ದರ್ಶನ್​ ಸ್ನೇಹಿತೆಯಾದ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಭೀಕರವಾಗಿ ಹತ್ಯೆ ಮಾಡಿದ ಆರೋಪ ದರ್ಶನ್​ ಹಾಗೂ ಡಿ ಗ್ಯಾಂಗ್ ಮೇಲಿದೆ. ರಾಷ್ಟ್ರ ಮಟ್ಟದಲ್ಲಿ ಈ ಪ್ರಕರಣ ಸುದ್ದಿ ಆಗುತ್ತಿದೆ. ದರ್ಶನ್​ ಅವರನ್ನು ನೋಡಲು ಅಭಿಮಾನಿಗಳು ಪ್ರತಿದಿನ ಜೈಲಿನ ಬಳಿ ಬರುತ್ತಿದ್ದಾರೆ.

ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅನೇಕ ಸೆಲೆಬ್ರಿಟಿಗಳು ಒತ್ತಾಯಿಸಿದ್ದಾರೆ. ಇತ್ತ, ದರ್ಶನ್​ ಪತ್ನಿ ವಿಜಯಲಕ್ಷ್ಮಿ ಅವರು ಗಂಡನ ಪರವಾಗಿ ಹೋರಾಡುತ್ತಿದ್ದಾರೆ. ಇಷ್ಟು ದಿನ ಸ್ಟಾರ್​ ನಟನಾಗಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ದರ್ಶನ್​ಗೆ ಜೈಲಿನಲ್ಲಿ ದಿನ ಕಳೆಯುವುದು ಕಷ್ಟವಾಗಿದೆ. ಹಾಗಾಗಿ ತಮಗೆ ಆಪ್ತರಾದ ನಿರ್ಮಾಪಕರಿಗೆ ಕರೆ ಮಾಡಿ ಜಾಮೀನು ಕೊಡಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಇತ್ತೀಚೆಗೆ ಮಾಹಿತಿ ಲಭ್ಯವಾಗಿತ್ತು.

No Comments

Leave A Comment