ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ಸಂಚಾರ ನಿಷೇಧ :ರಾಜ್ಯ ಸರ್ಕಾರ ಆದೇಶ
ಇಂದಿನಿಂದ ರಾಜ್ಯದಲ್ಲಿ ಈಗಾಗಲೇ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು 2021ರಿಂದಲೇ ಸ್ಥಗಿತಗೊಳಿಸಲಾಗಿತ್ತು. ಆದರೂ, ಹಲವು ಕಂಪನಿಯು ಎಲೆಕ್ಟಿçಕ್ ಬೈಕ್ ಟ್ಯಾಕ್ಸಿಗಳನ್ನು ಓಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಇನ್ನು ನಿನ್ನೆ ಶಾಂತಿನಗರ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಖಾಸಗಿ ಸಾರಿಗೆ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ಸಂಚಾರ ನಿಷೇಧ ಹೊರಡಿಸಲಾಗಿದೆ. ಸಂಘಟನೆಗಳ ಒತ್ತಾಯದ ಬಳಿಕ ಇಂದು ಹಾಗೂ ನಾಳೆ ಕಾರ್ಯಾಚರಣೆಗೆ ಇಳಿಯಲಿರುವ ಸಾರಿಗೆ ಇಲಾಖೆ ಅಧಿಕಾರಿಗಳು, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ವಿರುದ್ಧ ಮತ್ತು ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ ಈ ಬಗ್ಗೆ 11 ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಆಯುಕ್ತರು ಸೂಚಿಸಿದ್ದು, ನಗರದ ನಾನಾ ಭಾಗಗಳಲ್ಲಿರುವ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಅಧಿಕಾರಿಗಳು ಕಾರ್ಯಾಚರಣೆ ನಡೆಸಲಿದ್ದಾರೆ.
ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ಸರ್ಕಾರ ಬ್ಯಾನ್ ಮಾಡುವ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿತ್ತು.
ಅನಧಿಕೃತ ಬೈಕ್ ಟ್ಯಾಕ್ಸಿಗಳಿಗೂ ಕಡಿವಾಣ: ಬೆಂಗಳೂರಿನಲ್ಲಿ ನೋಂದಾಯಿತ ಕಂಪನಿಗಳಾದ ರ‍್ಯಾಪಿಡೋ, ಓಲಾ ಹಾಗೂ ಉಬರ್ ಬೈಕ್ ಟ್ಯಾಕ್ಸಿಗಳು ಹೊರತಾಗಿ ಅನಧಿಕೃತವಾಗಿ ನೋಂದಣಿ ಮಾಡಿಕೊಳ್ಳದೇ ಪಿಕಪ್, ಡ್ರಾಪ್ ಮಾಡುವ ಬೈಕ್ ಟ್ಯಾಕ್ಸಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಈ ಮೂಲಕ ಬೆಂಗಳೂರಿನಲ್ಲಿ ನಾಳೆಯಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಸಂಪೂರ್ಣ ಫುಲ್‌ಸ್ಟಾಪ್ ಬೀಳುವ ಮುನ್ಸೂಚನೆ ಕಂಡುಬಂದಿದೆ.