ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ಉಡುಪಿ ವಿದ್ಯಾರ್ಥಿಯಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕ; ವಿಡಿಯೋ ವೈರಲ್

ಉಡುಪಿ: ಇಲ್ಲಿನ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಉಡುಪಿಯ ನಿಟ್ಟೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕರೊಬ್ಬರು ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ಹೀನ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಈಗಾಗಲೇ ಸರಕಾರ ಸುತ್ತೋಲೆ ಜಾರಿಗೊಳಿಸಿ ಎಚ್ಚರಿಕೆ ನೀಡಿದೆ. ಆದರೂ ಅದನ್ನು ಲೆಕ್ಕಿಸದೆ ಇಂತಹ ಕೃತ್ಯ ಎಸಗುತ್ತಿರುವ ಶಿಕ್ಷಕರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಎಸ್‌ಡಿಎಂಸಿ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲ ಬಳಸಿಕೊಂಡು ಸ್ವಚ್ಛತೆ ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ. ಆದರೂ ಉಡುಪಿಯಲ್ಲಿ ಇಂತಹ ಕೃತ್ಯ ಶಿಕ್ಷಕರು ಎಸಗಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

kiniudupi@rediffmail.com

No Comments

Leave A Comment