ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಮಂಗಳೂರು: ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ನೇಮಕ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆಯುಕ್ತ ಸಿ ಲ್ ಆನಂದ್ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.ಮಂಡ್ಯ ಮೂಲದ ಆನಂದ್ ಸಿ ಎಲ್ ಅವರು ಭಾರತೀಯ ಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕಾರ್ಕಳ ಎಪಿಎಂಸಿಯಲ್ಲಿ ಒಂಬತ್ತು ತಿಂಗಳ ಕಾಲ ಎಫ್‌ಡಿಎ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

K.A.S ಹಿರಿಯ ಶ್ರೇಣಿಯ ಶಿವಮೊಗ್ಗ ಜಿಲ್ಲೆಯ ತುಂಗಭದ್ರಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನ ಅಧಿಕಾರಿ ರವಿಚಂದ್ರ ನಾಯಕ್ ರವರನ್ನು ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ನೇಮಕಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಮಂಗಳೂರಿನ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು

No Comments

Leave A Comment