ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್, ಮಾಜಿ ಸಂಸದಗೆ ಮತ್ತಷ್ಟು ದಿನ ಜೈಲೇ ಗತಿ
ಬೆಂಗಳೂರು;ಜುಲೈ 5: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಉಳಿದ ಕೇಸ್‌ಗಳಲ್ಲಿ ಬಾಡಿ ವಾರಂಟ್ ಮೂಲಕ ಕಸ್ಟಡಿಗೆ ಪಡೆದಿದ್ದರು. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸುವಂತೆ ವಕೀಲರ ಮನವಿ ಮಾಡಿದ್ದಾರೆ. ಆದ್ರೆ, ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ, ತನಿಖೆ ನಡೆಯಲಿ. ಶೀಘ್ರ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿ ಜಾಮೀನು ಅರ್ಜಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಹೊಳೆನರಸೀಪುರ ಪ್ರಕರಣದಲ್ಲಿ ಎರಡೂ ವಾರಗಳ ಕಾಲ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.
ಪ್ರಜ್ವಲ್ ರೇವಣ್ಣ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್‌ಗೆ ಮನವಿ ಮಾಡಿದರು. ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಹೇಳಿ 2 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದರು. ಇದೇ ವೇಳೆ ಸರ್ಕಾರದ ಪರ ಎಸ್‌ಪಿಸಿ ಜಗದೀಶ್ ಹಾಜರಾಗಿದ್ದರು.
ಪ್ರಜ್ವಲ್ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಲ್ಲಿ ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ದೂರುದಾರ ಮಹಿಳೆಯರ ಕುರಿತು ತನಿಖಾಧಿಕಾರಿಗಳು ಪ್ರಶ್ನಿಸಿದಾಗ ʼನನಗೇನೂ ಗೊತ್ತಿಲ್ಲ’ ಎಂದು ತಿಳಿಸಿದ್ದರು. ಇತ್ತೀಚೆಗೆ ಪ್ರಜ್ವಲ್ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆಯ ಬಗ್ಗೆ ವಿಚಾರಿಸಿದಾಗ, ʼನನಗೆ ಅವರು ಯಾರೆಂಬುದೇ ಗೊತ್ತಿಲ್ಲ’ ಎಂದು ಪ್ರಜ್ವಲ್ ಹೇಳಿದ್ದಾರೆನ್ನಲಾಗಿದೆ.
ಈ ನಡುವೆ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಜ್ವಲ್ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಈ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಹಾಗಾಗಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.