ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಹೆರಿಗೆ ವೇಳೆ ಮಗುವಿನ ಮರ್ಮಾಂಗವನ್ನೇ ಕಟ್ ಮಾಡಿದ ವೈದ್ಯ: ಕುಟುಂಬಸ್ಥರಿಂದ ಪ್ರತಿಭಟನೆ
ದಾವಣಗೆರೆ:ಜುಲೈ 5: ಇತ್ತೀಚಿನ ಕೆಲ ದಿನಗಳಲ್ಲಿ ವೈದ್ಯರನಿರ್ಲಕ್ಷಕ್ಕೆ ಪ್ರಾಣಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿರುವುದಾಗಿ ವರದಿ ಆಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಹೆರಿಗೆ ಮಾಡುವ ವೇಳೆ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನು ಕೊಯ್ದಿದ್ದರಿಂದ ಕಣ್ಣು ಬಿಡುವುದಕ್ಕೂ ಮುಂಚೆಯೇ ಮಗು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಈ ಭಾರೀ ಯಡವಟ್ಟಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯ ವೈದ್ಯ ಕಾರಣವೆಂದು ಆರೋಪಿಸಲಾಗಿದೆ. ಸದ್ಯ ಆಸ್ಪತ್ರೆ ಎದುರು ಮಗುವಿನ ಸಂಬಂಧಿಕರಿಂದ ಪ್ರತಿಭಟನೆ ಮಾಡಲಾಗಿದೆ.
ದಾವಣಗೆರೆ ಕೊಂಡಜ್ಜಿ ರಸ್ತೆಯ ನಿವಾಸಿ ಅರ್ಜುನ್ ಎಂಬುವರ ಪತ್ನಿ ಅಮೃತಾ ಅವರು ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್ ಡೆಲಿವರಿ ಆಗದ ಹಿನ್ನೆಲೆ ಸಿಸರಿನ್ ಮಾಡಿ ಮಗು ತೆಗೆಯುವ ವೇಳೆ ಮಗುವಿನ ಮರ್ಮಾಂಗಕ್ಕೆ ವೈದ್ಯರಿಂದ ತೊಂದರೆ ಮಾಡಿದ್ದಾರೆ.
ಜೂನ್ 27 ರಂದು ಅಮೃತಾಗೆ ಸಿಸರಿನ್ ಮಾಡಿ ಹೆರಿಗೆ ಮಾಡಲಾಗಿದೆ. ಈ ವೇಳೆ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗ್ ಕೊಯ್ದಿದಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಮಗುವನ್ನ ಬಾಪೂಜಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಸತತ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಗು ಮೃತಪಟ್ಟಿದೆ.
ಮಗುವಿನ ಸಾವಿಗೆ ವೈದ್ಯರು ಕಾರಣ ಅಂತ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಗುವಿನ ಸಾವಿಗೆ ಕಾರಣವಾದ ವೈದ್ಯನನ್ನು ಅಮಾನತು ಮಾಡುವಂತೆ ಪೋಷಕರು ಒತ್ತಾಯ ಮಾಡಿದ್ದಾರೆ.
ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಮತ್ತು ಕೂಸು ಸಾವು ಆರೋಪ
ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದ ನಿವಾಸಿಯಾಗಿದ್ದ ಪ್ರತಿಭಾ ಹಿರೇಮಠ ಎಂಬುವವರು ತನ್ನ ಎರಡನೇ ಹೆರಿಗೆಗಾಗಿ ಕೊಪ್ಪಳ ನಗರದಲ್ಲಿರುವ ಗೋವನಕೋಪ ಆಸ್ಪತ್ರೆಗೆ ದಾಖಲಾಗಿದ್ದರು. ತವರು ಮನೆ ಕೊಪ್ಪಳ ತಾಲೂಕಿನ ಹೊಸಳ್ಳಿ ಬಿ ಗ್ರಾಮವಾಗಿದ್ದರಿಂದ, ಕಳೆದ ಕೆಲ ತಿಂಗಳಿಂದ ಗೋವನಕೋಪ ಆಸ್ಪತ್ರೆಗೆ ಬಂದು ಪ್ರತಿಭಾ ಹಿರೇಮಠ ಚಿಕಿತ್ಸೆ ಪಡೆಯುತ್ತಿದ್ದರು.
ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ನಿನ್ನೆ ಮುಂಜಾನೆ ಹೆರಿಗೆಗೆ ದಾಖಲಾಗಿದ್ದಳು. ಇನ್ನೇನು ಕೆಲವೇ ಹೊತ್ತಲ್ಲಿ ಹೆರಿಗೆ ಆಗುತ್ತದೆ ಅಂತ ಕುಟಂಬದವರು ಸಂತಸದಲ್ಲಿದ್ದರು. ಆದರೆ ರಾತ್ರಿ ಎಂಟು ಗಂಟೆಗೆ ಪ್ರತಿಭಾಳಿಗೆ ರಕ್ತದೊತ್ತಡ ಹೆಚ್ಚಾಗಿತ್ತು. ಜೊತೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದರೆ ಹೆರಿಗೆ ಮಾಡಿಸಲು ಸಿದ್ದಮಾಡಿಕೊಂಡಿದ್ದ ಗೋವನಕೋಪ ಆಸ್ಪತ್ರೆಯವರು ದಿಢೀರನೆ ನಮ್ಮಲ್ಲಿ ಈ ಹೆರಿಗೆ ಮಾಡಿಸಲು ಆಗಲ್ಲಾ. ಐಸಿಯು ಬೆಡ್ ಮತ್ತು ಇನ್ನು ಹೆಚ್ಚಿನ ಚಿಕಿತ್ಸೆ ಅವಶ್ಯವಿರೋದರಿಂದ ದಿಢೀರನೆ ಜಿಲ್ಲಾ ಆಸ್ಪತ್ರೆಯಲ್ಲಿರುವ ತಾಯಿ ಮತ್ತು ಮಗುವಿನ ಆಸ್ಪತ್ರೆಗೆ ರವಾನೆ ಮಾಡಿದ್ದರು.
ಆದರೆ ಜಿಲ್ಲಾ ಆಸ್ಪತ್ರೆಯಲ್ಲಿರುವ ತಾಯಿ ಮತ್ತು ಮಗುವಿನ ಆಸ್ಪತ್ರೆ ಮುಟ್ಟುವ ಮುನ್ನವೇ ಹೊಟ್ಟೆಯಲ್ಲಿ ಕೂಸು ಮೃತಪಟ್ಟಿತ್ತು. ಹೀಗಾಗಿ ಜಿಲ್ಲಾ ಸರ್ಕಾರಿ ತಾಯಿ ಮತ್ತು ಮಗು ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಮೃತಪಟ್ಟ ಶಿಶುವನ್ನು ಹೊರತಗೆದಿದ್ದರು. ಆದರೆ ನಂತರ ಮಹಿಳೆಗೆ ಹೆಚ್ಚಿನ ರಕ್ತಸ್ರಾವ ಆರಂಭವಾಗಿತ್ತು. ಕೊನೆಗೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಪ್ರತಿಭಾ ಹಿರೇಮಠ ಮೃತಪಟ್ಟಿದ್ದರು. ಇನ್ನು ತಾಯಿ ಮತ್ತು ಕೂಸಿನ ಸಾವಿಗೆ ಗೋವನಕೋಪ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಅಂತ ಕುಟುಂಬದವರು ಆರೋಪಿಸಿದ್ದರು.