ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...
ರೇಣುಕಾಸ್ವಾಮಿ ಹತ್ಯೆ ಪ್ರಕರಣ: BBMP ಮಾಜಿ ಉಪಮೇಯರ್ ಸೇರಿ ಮೂವರಿಗೆ ನೋಟಿಸ್ ಜಾರಿ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು ಸೇರಿ ಮೂವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.
ಮಾಜಿ ಉಪಮೇಯರ್ ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಪೊಲೀಸರು, ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ.
ಮೋಹನ್ ರಾಜ್ ರಿಂದ 40 ಲಕ್ಷ ಹಣ ಪಡೆದಿದ್ದರ ಬಗ್ಗೆ ವಿಚಾರಣೆ ವೇಳೆ ದರ್ಶನ್ ಅವರು ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಯಾವ ಉದ್ದೇಶಕ್ಕಾಗಿ ದರ್ಶನ್ ಅವರಿಗೆ ಹಣ ನೀಡಲಾಗಿತ್ತು ಎಂಬುದರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಪ್ರಕರಣ ಸಂಬಂಧ ಪವಿತ್ರಾಗೌಡ ಸ್ನೇಹಿತೆ ಸಮತ ಅವರಿಗೂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ಆರೋಪಿ ಒಬ್ಬನಿಗೆ ಹಣಕಾಸಿನ ಸಹಾಯ ಮಾಡಿರುವ ಆರೋಪ ಇವರ ಮೇಲಿದೆ.
ಬೆಂಗಳೂರಿನ ಪ್ರಭಾವಿ ಶಾಸಕನ ಕಾರು ಚಾಲಕನಿಗೂ ನೋಟಿಸ್ ನೀಡಿದ್ದು. ಕಾರ್ತಿಕ್ ಪುರೋಹಿತ್ ಎಂಬ ಕಾರು ಚಾಲಕನಿಗೆ ನೋಟಿಸ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ರೇಣುಕಾಸ್ವಾಮಿ ಹತ್ಯೆ ಕೇಸ್ ಆರೋಪಿ ಪ್ರದೋಷ್ ಗೆ ಆಪ್ತನಾಗಿರುವ ಕಾರ್ತಿಕ್ ಪುರೋಹಿತ್ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.