ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಶಿವಮೊಗ್ಗ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಮೂವರು ಸಾವು

ಶಿವಮೊಗ್ಗ, ಜುಲೈ 6: ಶಿವಮೊಗ್ಗದ ಲಯನ್ ಸಫಾರಿ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment