ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ, ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧ

ದಕ್ಷಿಣ ಕನ್ನಡ, ಜು.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಅದರಂತೆ  ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಪ್ರವಾಸೋದ್ಯಮ ಸಂಬಂಧ ಗಿರಿಶಿಖರಗಳ ಚಾರಣ ನಿಷೇಧಿಸಿ ಆದೇಶ

ಹೌದು, ಭಾರಿ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಮರ ಬೀಳುವ ಸಾಧ್ಯತೆ ಇರುವುದರಿಂದ  ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಶಿಖರಗಳ ಟ್ರೆಕ್ಕಿಂಗ್, ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ಅದರಂತೆ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲೂ ನಿರ್ಬಂಧಿಸಿಲಾಗಿದೆ. ಇನ್ನು ಆದೇಶ ಉಲ್ಲಂಘಿಸಿದ್ರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಪಡುಕರೆ ಬೀಚಿನಲ್ಲಿ ಪ್ರವಾಸಿಗರ ಹುಚ್ಚಾಟ

ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಬಾರಿ ಮಳೆಗೆ ಕಡಲು ಪ್ರಕ್ಷಬ್ಧವಾಗಿದೆ. ಉಡುಪಿಯ ಪಡುಕರೆ ಬೀಚ್​ನಲ್ಲಿ ರಕ್ಕಸಗಾತ್ರದ ಅಲೆಗಳು ಅಬ್ಬರಿಸುತ್ತಿವೆ. ಈ ಮಧ್ಯೆ ಪಡುಕರೆ ಬೀಚಿನಲ್ಲಿ ಪ್ರವಾಸಿಗರ ಹುಚ್ಚಾಟ ಮೀತಿಮೀರಿದೆ. ಕಳೆದ ಮೂರು ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯ ಬಹುತೇಕ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿಷೇಧ ಹೇರಿದೆ. ಆದರೂ ಸಮುದ್ರ ತಡೆಗೋಡೆಯ ಮಧ್ಯೆ ನಿಂತು ಪ್ರವಾಸಿಗರ ರಿಸ್ಕಿ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಹುಚ್ಚಾಟ ಮಾಡುತ್ತಿದ್ದಾರೆ.

No Comments

Leave A Comment