ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಗಂಭೀರ ಆರೋಪ

ನವದೆಹಲಿ: ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಪ್ರಾಮಾಣಿಕ, ವಿದ್ಯಾವಂತ ಮತ್ತು ದೇಶಭಕ್ತ ವ್ಯಕ್ತಿಯಾಗಿದ್ದಾರೆ. ಸಾರ್ವಜನಿಕರು ಅವರನ್ನು ಬೆಂಬಲಿಸದಿದ್ದರೆ ಅವರಂತಹ ಬೇರೆ ಯಾವ ನಾಯಕನೂ ರಾಜಕೀಯಕ್ಕೆ ಸೇರಲು ಬಯಸುವುದಿಲ್ಲ. ಕೇಜ್ರಿವಾಲ್ ಅವರು ಆಳವಾದ ರಾಜಕೀಯ ಪಿತೂರಿಗೆ ಬಲಿಯಾಗಿದ್ದಾರೆ ಎಂದು ಸುನೀತಾ ಆರೋಪಿಸಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೇಜ್ರಿವಾಲ್ ಜುಲೈ 12ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ.

No Comments

Leave A Comment