ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಭಾರೀ ಮಳೆಗೆ ಸೂರತ್‍ನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು 7 ಮಂದಿ ಸಾವು
ಸೂರತ್‍ನಲ್ಲಿ ಭಾರೀ ಮಳೆಯಿಂದ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಸಾವಿಗೀಡಾಗಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರ ರಕ್ಷಣೆಗೆ ಎನ್‍ಡಿಆರ್‌ಎಫ್ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಶನಿವಾರ ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಈ ದುರ್ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಜನರ ರಕ್ಷಣೆಗಾಗಿ ಎನ್‍ಡಿಆರ್‍ಎಫ್ ಸಿಬ್ಬಂದಿ ರಾತ್ರಿಯಿಡೀ ಕಾರ್ಯ ನಿರ್ವಹಿಸಿದ್ದಾರೆ.
ಕುಸಿದು ಬಿದ್ದ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದವು. ಇದನ್ನು 2017 ರಲ್ಲಿ ನಿರ್ಮಿಸಲಾಗಿತ್ತು. ಈ ದುರ್ಘಟನೆ ವೇಳೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಕಟ್ಟಡದ ಒಳಗೆ ಮಲಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
8 ವರ್ಷಗಳ ಹಿಂದಷ್ಟೇ ನಿರ್ಮಾಣವಾಗಿದ್ದ ಈ ಕಟ್ಟಡ ಬಹುತೇಕ ಶಿಥಿಲಾವಸ್ಥೆಯಲ್ಲಿತ್ತು. ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡ ಕುಸಿದಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.