ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಹತ್ತಕ್ಕೂ ಅಧಿಕ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗುತ್ತದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಇದೀಗ ಎಫ್‌ಎಸ್‌ಎಲ್ ವರದಿಯಲ್ಲಿ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗಿರುವ ವಿಚಾರ ಬೆಳಕಿಗೆ ಬಂದಿದೆ.
ಎಫ್‌ಎಸ್‌ಎಲ್ ತಜ್ಞರು ಕ್ರೈಂ ಸೀನ್, ಶವ ಬಿಸಾಕಿದ ಜಾಗ, ಶವ ಸಾಗಾಟ ಮಾಡಿದ ವಾಹನ, ಶವ ಇಟ್ಟಿದ್ದ ಸೆಕ್ಯೂರಿಟಿ ಗಾರ್ಡ್ ಕೊಠಡಿ, ಮೃತನ ಬಟ್ಟೆಗಳು, ಹಲ್ಲೆ ಮಾಡಲು ಬಳಸಿದ ವಸ್ತುಗಳು, ಸಾಗಾಟ ಮಾಡಿದ ಕಾರ್, ಆರೋಪಿಗಳ ಬಟ್ಟೆಗಳ ಮೇಲಿನ ಫಿಂಗರ್ ಪ್ರಿಂಟ್ ಸಂಗ್ರಹಿಸಿದ್ದರು. ಆರೋಪಿಗಳನ್ನ ಬಂಧಿಸಿದ ಬಳಿಕ ಅವರೆಲ್ಲರ ಫಿಂಗರ್ ಪ್ರಿಂಟ್ ಪಡೆದು ಎಫ್‌ಎಸ್‌ಎಲ್‌ಗೆ ರವಾನಿಸಲಾಗಿತ್ತು. ಇದೀಗ ಬಂದಿರುವ ವರದಿಯ ಪ್ರಕಾರ ಈ ಫಿಂಗರ್ ಪ್ರಿಂಟ್ ಆರೋಪಿಗಳ ವಿರುದ್ಧ ಪ್ರಮುಖ ಸಾಕ್ಷಿಯಾಗಲಿದೆ ಎನ್ನಲಾಗಿದೆ.
ಒಂದುವೇಳೆ ತನಿಖೆ ಸಂದರ್ಭದಲ್ಲಿ ಪೊಲೀಸರು ಪ್ರಬಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸದೇ ಇದ್ದಲ್ಲಿ ಆರೋಪಿಗಳು ಪ್ರಕರಣದಿಂದ ಖುಲಾಸೆ ಆಗುತ್ತಾರೆ. ಇದೀಗ ಫಿಂಗರ್ ಪ್ರಿಂಟ್ ಹೋಲಿಕೆಯಾಗಿರುವುದು ಕೋರ್ಟ್ ವಿಚಾರಣೆಯ ವೇಳೆ ಪ್ರಮುಖ ಸಾಕ್ಷ್ಯವಾಗಲಿದೆ.