ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಉಡುಪಿ ದೇವಸ್ಥಾನದಲ್ಲಿ ಹರಕೆ ತೀರಿಸಿದ ಸೂರ್ಯಕುಮಾರ್ ಯಾದವ್

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ (Suryakumar Yadav) ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಈ ಹರಕೆ ತೀರಿಸಲು ಇದೀಗ ಕಾಪುವಿನ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಇನ್ನು ಕಾಪು ದೇವಸ್ಥಾನಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ದಂಪತಿಯನ್ನು ದೇವಳದ ಆಡಳಿತ ಮಂಡಳಿ ಸನ್ಮಾನಿಸಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾ ಆಟಗಾರನಿಗೆ ಸೂಕ್ತ ಭದ್ರತೆ ಒದಗಿಸಲು ಮಾರಿಗುಡಿ ಸುತ್ತ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು.

ಅದರಂತೆ ಮಂಗಳವಾರ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಹಾಗೂ ದೇವಿಶಾ ಮಾರಿಗುಡಿ ದೇವಸ್ಥಾನದಲ್ಲಿ ಹರಕೆ ತೀರಿಸಿ ತೆರಳಿದ್ದಾರೆ. ಇದೀಗ ಉಡುಪಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ 10 ಭರ್ಜರಿ ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ ಒಟ್ಟು 199 ರನ್ ಬಾರಿಸಿದ್ದರು. ಅದರಲ್ಲೂ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ ಗೆಲುವು ದಾಖಲಿಸಿತ್ತು. ಈ ಸಂಭ್ರಮದ ನಡುವೆ ಸೂರ್ಯಕುಮಾರ್ ಉಡುಪಿಗೆ ಬಂದು ತಮ್ಮ ಹರಕೆ ತೀರಿಸಿರುವುದು ವಿಶೇಷ.

No Comments

Leave A Comment