ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಬೆಂಗಳೂರು: ಎಂಜಿ ರಸ್ತೆಯಲ್ಲಿ BMTC ಬಸ್’ಗೆ ಆಕಸ್ಮಿಕ ಬೆಂಕಿ, ತಪ್ಪಿದ ಅನಾಹುತ
ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ನಡೆದ ಘಟನೆ ನಡೆದಿದೆ. ಬಸ್ ನಲ್ಲಿ ಜನರಿದ್ದು, ಬೆಂಕಿ ಕಾಣಿಸಿಕೊಂಡತೆ ಎಚ್ಚೆತ್ತ ನಿರ್ವಾಹಕ ಅವರನ್ನು ಕೆಳಕ್ಕಿಳಿಸಿದ್ದಾರೆ.
ಘಟನೆ ವೇಳೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಈ ಘಟನೆಯಿಂದಾಗಿ, ಎಂಜಿ ರಸ್ತೆಯ ಸದಾ ದಟ್ಟ ವಾಹನನಿಬಿಡ ಸ್ಥಳವಾದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಟ್ರಾಫಿಕ್ ಅಸ್ತವ್ಯಸ್ತವಾಯಿತು. ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್‌ನಿಂದ ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತು