ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಮೂಡಿಗೆರೆ: ನಿಷೇಧಿತ ಪ್ರೆದೇಶದ ಜಲಪಾತದಲ್ಲಿ ಮೋಜು ಮಸ್ತಿ – ಚಡ್ಡಿಯಲ್ಲೇ ಓಡಿಸಿದ ಪೊಲೀಸರು

ಮೂಡಿಗೆರೆ : ಜಿಲ್ಲಾಡಳಿತ ನಿಷೇಧಿತ ಪ್ರೆದೇಶ ಎಂದು ಘೋಷಿಸಿದ್ದ ಜಲಪಾತದಲ್ಲಿ ಮೋಜು ಮಸ್ತಿಯಲ್ಲಿ ನಿರತರಾಗಿದ್ದ ಯುವಕರನ್ನು ಪೊಲೀಸರು ಚಡ್ಡಿಯಲ್ಲಿ ಓಡಿಸಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ.

ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಹುಚ್ಚಾಟ ತೋರುತ್ತಿದ್ದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಿದ ಬಣಕಲ್ ಗಸ್ತು ಪೊಲೀಸರು ಯುವಕರ ಬಟ್ಟೆಗಳನ್ನು ತಂದು ಗಸ್ತು ವಾಹನಕ್ಕೆ ತುಂಬಿ ಶಾಕ್ ನೀಡಿದ್ದಾರೆ. ಪೊಲೀಸರ ಹಿಂದೆ ಚಡ್ಡಿಯಲ್ಲೇ ಓಡಿ ಬಂದ ಯುವಕರು ಪ್ಲೀಸ್ ಸರ್, ಇನ್ನೊಂದ್ ಸಲ ಹೀಗೆ ಮಾಡುವುದಿಲ್ಲ, ದಯವಿಟ್ಟು ಬಟ್ಟೆ ಕೊಡಿ ಎಂದು ಅಂಗಲಾಚಿದ್ದಾರೆ.

ಆ ಬಳಿಕ ಪ್ರವಾಸಿ ಯುವಕರು ಬಟ್ಟೆ ಕೊಡುವಂತೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಕೊನೆಗೆ ಪೊಲೀಸರು ಎಚ್ಚರಿಕೆ ಕೊಟ್ಬ ಬಳಿಕ ಬಟ್ಟೆಗಳನ್ನು ಕೊಟ್ಟು ಕಳುಹಿಸಿದ್ದಾರೆ.

No Comments

Leave A Comment