ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಇದನ್ನು ಬೇರೆ ಪ್ರಕರಣಗಳಂತೆ ಪರಿಗಣಿಸಲಾಗುವುದು’; ಜುಲೈ 18ರವರೆಗೆ ದರ್ಶನ್ಗೆ ಜೈಲೂಟವೇ ಗತಿ
ನಟ ದರ್ಶನ್ ಅವರಿಗೆ ಜೈಲೂಟ ಸೇರುತ್ತಿಲ್ಲ. ಇದರಿಂದ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ ಎನ್ನಲಾಗಿದೆ. ದರ್ಶನ್ ಅವರು ಜೈಲೂಟದಿಂದ ಸಾಕಷ್ಟು ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಹೈಕೋರ್ಟ್ನಲ್ಲಿ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಮನೆಯಿಂದ ಊಟ, ಹಾಸಿಗೆ, ಪುಸ್ತಕ ತರಲು ಅವಕಾಶ ನೀಡಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ಮಾಡುವಂತೆ ಕೋರಲಾಗಿತ್ತು. ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಸಿದೆ. ‘ಈ ಪ್ರಕರಣವನ್ನು ಇತರ ಪ್ರಕರಣಗಳಂತೆ ಪರಿಗಣಿಸಲಾಗುವುದು’ ಎಂದು ಅವರು ಹೇಳಿದ್ದಾರೆ.