ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕರ್ನಾಟಕದಲ್ಲಿ ಡೆಂಗ್ಯೂ ಹೆಚ್ಚಳಕ್ಕೆ ಹೈಕೋರ್ಟ್ ಕಳವಳ: ಸರ್ಕಾರಕ್ಕೆ ಖಡಕ್​ ಸೂಚನೆ

ಬೆಂಗಳೂರು, ಜುಲೈ 10: ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳಕ್ಕೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ. ರಾಯಚೂರಿನ ಹೆಚ್​​ಕೆ ವಿಜಯ್ ಕುಮಾರ್ ಎಂಬುವವರು ಪತ್ರಿಕೆಯೊಂದಕ್ಕೆ ಬರೆದ ಪತ್ರವನ್ನು ಆಧರಿಸಿ ಹೈಕೋರ್ಟ್ ಪಿಐಎಲ್​ ದಾಖಲಿಸಿಕೊಂಡಿದೆ. ಜುಲೈ 23 ರೊಳಗೆ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಕ್ರಮಗಳ ಬಗ್ಗೆ ತಿಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮತ್ತು ಆರೋಗ್ಯ ಇಲಾಖೆಯ ಕಾರ್ಯದರ್ಶಿಗೂ ತುರ್ತು ನೋಟಿಸ್ ಹೊರಡಿಸಿದೆ.

ಬೆಂಗಳೂರು, ಗ್ರಾಮೀಣ ಭಾಗದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ ಎಂದು ಸಿಜೆ ಎನ್​ವಿ ಅಂಜಾರಿಯಾ ಮತ್ತು ನ್ಯಾ. ಕೆ.ವಿ ಅರವಿಂದ್‌ ಅವರಿದ್ದ ಪೀಠ ಆತಂಕ ವ್ಯಕ್ತಪಡಿಸಿದೆ.

ನಾಗರಿಕರಿಗೆ ಆರೋಗ್ಯ ಹಾಗೂ ಚಿಕಿತ್ಸೆ ಹಕ್ಕಿದೆ. ನಾಗರಿಕರಿಗೆ ಆರೋಗ್ಯಕರ ಪರಿಸರದಲ್ಲಿ ಬದುಕುವ ಹಕ್ಕಿದೆ.  ಗ್ರಾಮೀಣ ಹಾಗೂ ನಗರದಲ್ಲಿ ವೈದ್ಯಕೀಯ ಸೌಲಭ್ಯಗಳು, ಸೊಳ್ಳೆಗಳ ಸಂತಾನ ನಿಯಂತ್ರಣಕ್ಕೆ ಕೈಗೊಂಡ  ಕ್ರಮಗಳು ಮತ್ತು ಜನಜಾಗೃತಿ ಕ್ರಮಗಳ ಬಗ್ಗೆ ವಿವರ ನೀಡಲು ಹೈಕೋರ್ಟ್ ನಿರ್ದೇಶನ ನೀಡಿದೆ.

ಒಂದೇ ದಿನದಲ್ಲಿ ಬೆಂಗಳೂರಿನಲ್ಲೇ 91 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇನ್ನು ವಿವಿಧ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಅತೀ ವೇಗವಾಗಿ ಹೆಚ್ಚಳವಾಗುತ್ತಿವೆ. ಚಿಕ್ಕಮಗಳೂರಿನಲ್ಲಿ 521, ಮೈಸೂರಿನಲ್ಲಿ 496, ಹಾವೇರಿಯಲ್ಲಿ 481, ಧಾರವಾಡದಲ್ಲಿ 289, ಚಿತ್ರದುರ್ಗದಲ್ಲಿ 275 ಪ್ರಕರಣಗಳು ಕಂಡಬಂದಿವೆ.

ಗದಗ ಜಿಲ್ಲೆಯಲ್ಲಿ ಡೆಂಗ್ಯೂ ಅಟ್ಟಹಾಸಕ್ಕೆ ಜನರು ಕಂಗಾಲಾಗಿದ್ದಾರೆ. ಗದಗ-ಬೆಟಗೇರಿ ಅವಳಿ ನಗರದಲ್ಲಿ ಆತಂಕ ಹೆಚ್ಚಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 62 ಡೆಂಗ್ಯೂ ಪಾಸಿಟಿವ್​ ಕಂಡುಬಂದಿದೆ. 16 ಮಕ್ಕಳಿಗೆ ಜಿಮ್ಸ್ ಆಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಡೆಂಗ್ಯೂಗೆ ನಗರದಲ್ಲಿ ಒಂದು ಸಾವಾಗಿದ್ದು, ನಗರಸಭೆ ಮಾತ್ರ ಸ್ವಚ್ಚತೆ ಬಗ್ಗೆ ಡೋಂಟ್ ಕೇರ್ ಎನ್ನುತ್ತಿದೆ.

kiniudupi@rediffmail.com

No Comments

Leave A Comment