ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ಕೇಸ್: ಶಾಸಕ ಭರತ್ ಶೆಟ್ಟಿಗೆ ಬಿಗ್ ರಿಲೀಫ್

ಮಂಗಳೂರು, ಜುಲೈ 11: ನಗರದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ  ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಸ್​ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿಗೆ  ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ. ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ್ದರು. ಜುಲೈ 8ರಂದು ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಸದಸ್ಯ ಕಾಂಗ್ರೆಸ್​​ನ ಅನಿಲ್ ಕುಮಾರ್ ನೀಡಿದ್ದ ದೂರು ಆಧರಿಸಿ BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗುತ್ತು. ಇನ್ನು ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಹೇಳಿಕೆ ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್​​ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು.

ಸೋಮವಾರ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಶಾಸಕ ಡಾ.ಭರತ್ ಶೆಟ್ಟಿ, ಸಂಸತ್ತಿನ ಒಳಗೆ ರಾಹುಲ್ ಗಾಂಧಿಗೆ ಕಪಾಳಮೋಕ್ಷ ಮಾಡಬೇಕು ಅನ್ನಿಸುತ್ತಿದೆ ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದರು.

ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದೇನು?

ರಾಹುಲ್ ಗಾಂಧಿ ಹಿಂದೂ ದೇವರಾದ ಶಿವನ ಚಿತ್ರವನ್ನು ಹಿಡಿದಿದ್ದಾರೆ. ಶಿವನು ತನ್ನ ಮೂರನೇ ಕಣ್ಣು ತೆರೆದರೆ, ಅವನು ಬೂದಿಯಾಗುತ್ತಾನೆ ಎಂದು ಆ ಹುಚ್ಚನಿಗೆ ತಿಳಿದಿಲ್ಲ. ಅವರು ಹಿಂದೂ ವಿರೋಧಿ ನೀತಿಯನ್ನು ಅಳವಡಿಸಿಕೊಂಡಿದ್ದಾರೆ ಎಂದಿದ್ದಾರೆ.

ರಾಹುಲ್ ಗಾಂಧಿ ಒಬ್ಬ ಹುಚ್ಚ ಎಂಬುದು ಸ್ಪಷ್ಟವಾಗಿದೆ. ಹಿಂದೂಗಳು ತಮ್ಮ ಬಗ್ಗೆ ಏನು ಹೇಳಿದರೂ ಸದ್ದಿಲ್ಲದೆ ಕೇಳುತ್ತಾರೆ. ಅವರು ಸಂಸತ್ತಿನಲ್ಲಿ ಬೊಗಳಿದರೆ, ಸ್ಥಳೀಯ ನಾಯಕರು ಇಲ್ಲಿ ಬಾಲ ಅಲ್ಲಾಡಿಸಲು ಪ್ರಾರಂಭಿಸುತ್ತಾರೆ ಎಂದು ಶೆಟ್ಟಿ ವಾಗ್ದಾಳಿ ಮಾಡಿದ್ದರು.

No Comments

Leave A Comment