ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಭರ್ಜರಿ ಭೇಟಿಯಾಡಿದೆ.
ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ್ದ ಮಾಜಿ ಬಿ. ನಾಗೇಂದ್ರ ಅವರನ್ನು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗಾಗಿ ಶಾಂತಿನಗರದ ಕಚೇರಿಗೆ ಇಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ.
ಹಗರಣ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಕಳೆದ ಎರಡ್ಮೂರು ದಿನಗಳಿಂದ ವಿವಿಧೆಡೆ ದಾಳಿ ನಡೆಸಿದ್ದರು. ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ನಿವಾಸಗಳಲ್ಲಿ ಶೋಧ ಕಾರ್ಯ ನಡೆದಿತ್ತು. ಒಟ್ಟು ಹದಿನೆಂಟು ಕಡೆ ದಾಳಿ ಮಾಡಿ ಅಕ್ರಮ ವ್ಯವಹಾರದ ದಾಖಲೆ ಪತ್ರಗಳ ಪರಿಶೀಲನೆ ನಡೆಸಿತ್ತು. ಬಸವನಗೌಡ ದಡ್ಡಲ್ ಅವರ ಮಾಜಿ ಪಿಎ ಪಂಪಣ್ಣ ಮನೆ ಮೇಲೂ ಇಡಿ ದಾಳಿ ನಡೆದಿದ್ದು, ಅಕ್ರಮಗಳ ಮಾಹಿತಿ ಲಭ್ಯವಾಗಿತ್ತು.
ಹಗರಣದಲ್ಲಿ ಪಂಪಣ್ಣ 50 ಲಕ್ಷ ರೂಪಾಯಿ ಕಮಿಷನ್ ಪಡೆದಿರುವ ಆರೋಪ ಕೇಳಿಬಂದಿತ್ತು. ಪಂಪಣ್ಣ ಹಗರಣ ಕುರಿತು ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.