ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು!
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜತೆಗೆ ಸುಪ್ರೀಂ ಕೋರ್ಟ್ ನ್ಯಾಯಪೀಠವು ಜಾರಿ ನಿರ್ದೇಶನಾಲಯದಿಂದ ತಮ್ಮ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿಂತೆ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಇ.ಡಿಯ ಈ ಕ್ರಮವನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತ ಅವರಿದ್ದ ಪೀಠವು, ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಅಬಕಾರಿ ನೀತಿ ಹಗರಣದಲ್ಲಿ ಇ.ಡಿ ದಾಖಲಿಸಿಕೊಂಡ ಪ್ರಕರಣಲ್ಲಿ ಕೇಜ್ರಿವಾಲ್ ಅವರಿಗೆ ಜಾಮೀನು ಲಭಿಸಿದರೂ, ಜೈಲಿನಿಂದ ಹೊರಬರುವಂತಿಲ್ಲ. ಇದೇ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರನ್ನು ಸಿಬಿಐ ಬಂಧಿಸಿದೆ.
ಅರವಿಂದ್ ಕೇಜ್ರಿವಾಲ್ ಅವರು 90 ದಿನಗಳಿಗೂ ಹೆಚ್ಚು ಕಾಲದಿಂದ ಕಾರಾಗೃಹ ವಾಸ ಅನುಭವಿಸಿದ್ದಾರೆ. ಅವರು ಒಬ್ಬ ಚುನಾಯಿತ ನಾಯಕ. ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯಬೇಕೇ ಅಥವಾ ಬೇಡವೇ ಎನ್ನುವುದು ಅವರ ವಿವೇಚನೆಗೆ ಬಿಟ್ಟ ಸಂಗತಿ. ಜೀವಿಸುವ ಹಕ್ಕನ್ನು ನಾವು ಪರಿಗಣಿಸುತ್ತೇವೆ. ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿರುವುದರಿಂದ ಮಧ್ಯಂತರ ಜಾಮೀನಿನ ಮೇಲೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಲು ನಿರ್ದೇಶಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.