ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಕಾಪು ಗರುಡ ಗ್ಯಾಂಗ್ ಗೆ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ: ಯುವತಿ ಬಂಧನ
ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ ಯಾನೆ ಸಾಜಿದ (21) ಎಂದು ಗುರುತಿಸಲಾಗಿದೆ.
ಗರುಡ ಗ್ಯಾಂಗ್ ಸದಸ್ಯರಿಗೆ ಸಫಾರ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಸಫಾರ ಯಾನೆ ಸಾಜಿದ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಸದ್ಯ ಸಫಾರ ಯಾನೆ ಸಾಜಿದಯನ್ನು ಮಂಗಳೂರಿನ ಕಾರಾಗೃಹದಲ್ಲಿ ಇರಿಸಲಾಗಿದೆ.