ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಉಡುಪಿ| ತೆಂಕನಿಡಿಯೂರು ಗ್ರಾ ಪಂ ಸಭೆಯಲ್ಲಿ ಕೈ ಕೈ ಮಿಲಾಯಿಸಿಕೊಂಡ ಸದಸ್ಯರು
ಉಡುಪಿ: ಕೆಳಾರ್ಕಳಬೆಟ್ಟುವಿನ ತ್ಯಾಜ್ಯ ಸಂಸ್ಕರಣ ಘಟಕದ ಒಳಗಡೆ ಹೊಂಡವನ್ನು ತೋಡಿ ಕಸ ವಿಲೇವಾರಿ ಮಾಡಿರುವ ವಿಚಾರದ ಕುರಿತು ಶುಕ್ರವಾರ ನಡೆದ ತೆಂಕನಿಡಿಯೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ: ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು ಪರಸ್ಪರ ಕೈ ಮಿಲಾಯಿಸಿ ಎಳೆದಾಡಿಕೊಂಡಿದ್ದು, ಇದರಿಂದ ಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಠಿ ಯಾಯಿತು.
ತೆಂಕನಿಡಿಯೂರು ಗ್ರಾಪಂ ವ್ಯಾಪ್ತಿಯ ಕೆಳಾರ್ಕಳಬೆಟ್ಟುವಿನ ತ್ಯಾಜ್ಯ ಸಂಸ್ಕರಣ ಘಟಕದ ಒಳಗಡೆ ಹೂತಿಟ್ಟ ಕಸವನ್ನು ತೆರವುಗೊಳಿಸದ ಗ್ರಾಪಂ ಹಾಗೂ ಅಧಿಕಾರಿಗಳ ಧೋರಣೆ ವಿರೋಧಿಸಿ ಬಿಜೆಪಿ ಬೆಂಬಲಿತ ಸದಸ್ಯರ ನೇತೃತ್ವದಲ್ಲಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕದಿಂದ ಮೆರವಣಿಗೆ ಹೊರಟ ಪ್ರತಿಭಟನಕಾರರು ಗ್ರಾಪಂ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.
ಈ ಮಧ್ಯೆ ಇಂದು ಗ್ರಾಪಂ ಅಧ್ಯಕ್ಷೆ ಶೋಭಾ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆಯನ್ನು ಕರೆಯಲಾಗಿದ್ದು, ಕಾಂಗ್ರೆಸ್
ಬೆಂಬಲಿತ ಆಡಳಿತ ಪಕ್ಷದ 13 ಮಂದಿ ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಆದರೆ ಬಿಜೆಪಿ ಬೆಂಬಲಿತ ಸದಸ್ಯರು ಸಭೆಗೆ ಆಗಮಿಸಿದೆ ಗೈರು ಹಾಜರಾಗಿದ್ದರು. ಕಾಂಗ್ರೆಸ್ ಬೆಂಬಲಿತ 13 ಮಂದಿ ಸದಸ್ಯರು, ಕೋರಂ ಇದೆ ಎಂದು ಹೇಳಿ ಸಭೆನಡೆಸಲು ಮುಂದಾದರು. ಈ ವೇಳೆ ಆಗಮಿಸಿದ ಬಿಜೆಪಿ ಸದಸ್ಯರು ಕೋರಂ ಕೊರತೆ ಬಗ್ಗೆ ಆರೋಪ ಮಾಡಿ, ಸಭೆ ನಡೆಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.ಇದರಿಂದ ಸದಸ್ಯರುಗಳ ಮಧ್ಯೆ ವಾಗ್ವಾದ, ಮಾತಿನ ಚಕಮಕಿ ನಡೆಯಿತು. ಸಭೆ ನಡೆಸುವುದಕ್ಕೆ ಬಿಜೆಪಿ ಬೆಂಬಲಿತ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ದರು. ಯಾವುದೇ ಕಾರಣಕ್ಕೂ ಸಭೆ ನಡೆಸಲು ಬಿಡುವುದಿಲ್ಲ ಎಂದು ಪಟ್ಟುಹಿಡಿ ದರು. ಆಡಳಿತ ಪಕ್ಷದ ಸದಸ್ಯರು ಸಭೆ ನಡೆಸಲು ಅನುವು ಮಾಡಿಕೊಡು ವಂತೆ ಪೊಲೀಸರಿಗೆ ತಿಳಿಸಿದರು. ಆದರೆ ಪೊಲೀಸರು, ಸದನದೊಳಗೆ ಬರಲು ಅವಕಾಶ ಇಲ್ಲ ಎಂದು ಹೇಳಿ ಸುಮ್ಮನಾದರು.
ಬಳಿಕ ಸದಸ್ಯರು ಪರಸ್ಪರ ಕೈ ಮಿಲಾಯಿಸಿಕೊಂಡು ಎಳೆದಾಡಿಕೊಂಡರು. ಇದರಿಂದ ಸಭೆಯಲ್ಲಿ ಕೋಲಾಹಲ ಸೃಷ್ಠಿ ಯಾಯಿತು. ತದನಂತರ ಬಿಜೆಪಿ ಸದಸ್ಯರನ್ನು ಸಭೆಯಿಂದ ಹೊರ ದಬ್ಬಲಾಯಿತು ಎಂದು ಎಂದು ಆರೋಪಿಸಲಾಗಿದೆ. ಇದರಿಂದ ಅಧ್ಯಕ್ಷರು ಸೇರಿದಂತೆ ಕೆಲವು ಸದಸ್ಯರು ಗಾಯಗೊಂಡರೆಂದು ದೂರಲಾಗಿದೆ. ಅದರಂತೆ ಕೆಲವು ಸದಸ್ಯರು
ಆಸ್ಪತ್ರೆಗೆ ದಾಖಲಾಗಿದ್ದು, ಎರಡು ಕಡೆಗಳಿಂದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಸಿದ್ಧತೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.