ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ – ನದಿ ತೀರದ ಜನರಿಗೆ ಎಚ್ಚರಿಕೆ
ಬಂಟ್ವಾಳ:ಜು 13ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1ಮೀ.ನಷ್ಟಿದೆ. ನೇತ್ರಾವತಿ ನದಿಯಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ.
ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ. ತುಂಬೆ ಡ್ಯಾಮ್‌ನ ಎಲ್ಲಾ ಗೇಟ್‌ಗಳನ್ನು ತೆರವು ಮಾಡಿದರೆ ನೀರು ತೀರಾ ಇಳಿಕೆಯಾಗುವ ಸಾಧ್ಯತೆಯೂ ಇದೆ. ಉಪ್ಪಿನಂಗಡಿಯ ನದಿ ನೀರಿನ ಮಟ್ಟದಲ್ಲೂ ಹೆಚ್ಚಳಗೊಂಡಿರುವ ಕಾರಣ ನದಿ ತೀರದ ನಿವಾಸಿಗಳು ಬಹಳ ಎಚ್ಚರಿಕೆಯಿಂದ ಇರಬೇಕಾಗಿದೆ. ಅನಾವಶ್ಯಕವಾಗಿ ನದಿ ತೀರಕ್ಕೆ ತೆರಳುವುದು ಅಥವಾ ನೀರಿಗೆ ಇಳಿಯುವುದು ಸರಿಯಲ್ಲ ಎಂದು ಇಲಾಖೆ ಸೂಚಿಸಿದೆ.
ಅಧಿಕಾರಿಗಳು ನದಿ ತೀರಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.